ಸಂದರ್ಶನ ಎದುರಿಸುವ ಕಲೆ ಕರಗತ : ವಿವೇಕ್ ವಲ್ಲಭ್ ಕಿವಿಮಾತು

New Project (21)
Published on

ಮೂಡುಬಿದಿರೆ: ಕಾಲೇಜು ವಿದ್ಯಾಭ್ಯಾಸ ಮುಗಿಸಿ ವೃತ್ತಿ ಜೀವನಕ್ಕೆ ಕಾಲಿಡುವ ಪ್ರತಿ ವಿದ್ಯಾರ್ಥಿಯೂ ಸಂದರ್ಶನ ಎದುರಿಸುವ ಕಲೆಯನ್ನು ಕರಗತ ಪಡಿಸಿಕೊಂಡಿರಬೇಕು. ಪ್ರತಿ ನಿರ್ಧಾರ ಜಾಗರೂಕತೆಯಿಂದ ತೆಗೆದುಕೊಳ್ಳುವ ಮನೋಭಾವ ಬೆಳೆಸಿಕೊಂಡರೆ ಯಶಸ್ಸು ಸುಲಭ ಸಾಧ್ಯ ಎಂದು ಬನ್ನಡ್ಕ ಎಸ್‌ಕೆಎಫ್ ಎಲಿಕ್ಸರ್ ಪ್ರೈವೇಟ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ವಿವೇಕ್ ವಲ್ಲಭ್ ಹೇಳಿದರು.

ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಮಾಜಕಾರ್ಯ ಫೋರಮ್‌ನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಆಳ್ವಾಸ್ (ಸ್ವಾಯತ್ತ ) ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಸಮಾಜಕಾರ್ಯ ಎನ್ನುವುದು ಎಂದಿಗೂ ಸಮುದಾಯವನ್ನು ಕಟ್ಟುವ ಮತ್ತು ಅಭಿವೃದ್ಧಿ ಪೋಷಿಸುವ ಕಾರ್ಯದಲ್ಲಿ ತನ್ನೊಂದಿಗೆ ತನ್ನವರನ್ನು ಬೆಳೆಸುವ ಕ್ಷೇತ್ರ. ಹಾಗಾಗಿ ಎಂತಹ ಪರಿಸ್ಥಿಯಲ್ಲಿಯೂ ಮನುಷತ್ವ ಮರೆತು ವರ್ತಿಸದಿರಿ. ನಿಮ್ಮ ಸುತ್ತಮುತ್ತಲಿನ ಸಮುದಾಯದ ಒಳಿತಿಗೆ ಸದಾ ಶ್ರಮಿಸುತ್ತಿರಿ ಎಂದರು.

ಅತ್ಯುತ್ತಮ ಸಮಾಜಕಾರ್ಯ ವಿದ್ಯಾರ್ಥಿ ಹಾಗೂ ಸಮುದಾಯ ಶಿಬಿರದ ಅತ್ಯುತ್ತಮ ಶಿಬಿರಾರ್ಥಿ ಪ್ರಶಸ್ತಿಯನ್ನು ಕ್ರಮವಾಗಿ ಲಾವಣ್ಯ ಹಾಗೂ ಮಹೇಶ್‌ಗೆ ನೀಡಿ ಅಭಿನಂದಿಸಲಾಯಿತು.

ಆಳ್ವಾಸ್ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ.ಮಧುಮಾಲಾ ಕೆ., ಸಮಾಜಕಾರ್ಯ ಫೋರಮ್ ಸಂಯೋಜಕ ಕೃಷ್ಣಮೂರ್ತಿ ಬಿ., ವಿದ್ಯಾರ್ಥಿ ಸಂಯೋಜಕ ಶ್ರೇಯಸ್, ಫೋರಮ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net