ತೋಟಕ್ಕೆ ಉರುಳಿದ ವಾಹನ : ಚಾಲಕ ಪ್ರಾಣಾಪಾಯದಿಂದ ಪಾರು

Published on

ಪುತ್ತೂರು ಗ್ರಾಮಾಂತರ: ಪಾಣಾಜೆ ಗ್ರಾಮದ ಕೊರಿಂಗಿಲ ಎಂಬಲ್ಲಿ ಪುತ್ತೂರು-ಪಾಣಾಜೆ ರಸ್ತೆಯಲ್ಲಿ ವಾಹನವೊಂದಕ್ಕೆ ಸೈಡ್ ಕೊಡುವ ವೇಳೆ ಕಾಂಕ್ರೀಟ್‌ಮಿಕ್ಸರ್ ವಾಹನವೊಂದು ರಸ್ತೆ ಬದಿಯ ತೋಟಕ್ಕೆ ಉರುಳಿಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಪಾಣಾಜೆ ಸರ್ಕಾರಿ ಸಮುದಾಯ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ಕಾಂಕ್ರೀಟ್‌ಮಿಕ್ಸರ್ ವಾಹನ ಎದುರಿನಿಂದ ಬರುತ್ತಿದ್ದ ಲಾರಿಯೊಂದಕ್ಕೆ ಸೈಡ್ ಕೊಡುವ ವೇಳೆ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿ, ನಿಯಂತ್ರಣ ಕಳೆದುಕೊಂಡು ಪಕ್ಕದ ತೋಟಕ್ಕೆ ಉರುಳಿಬಿದ್ದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net