More

    ಸರ್ಕಾರಗಳ ಜನವಿರೋಧಿ ನೀತಿಗೆ ಖಂಡನೆ

    ಸೋಮವಾರಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ(ಜೆಸಿಟಿಯು) ಸೋಮವಾರಪೇಟೆ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

    ಕರೊನಾ ಸೇನಾನಿಗಳ ಸುರಕ್ಷತೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಆಶಾ, ಅಂಗನವಾಡಿ, ಬಿಸಿಯೂಟ ಹಾಗೂ ಸ್ಕೀಂ ನೌಕರರ ಕೆಲಸವನ್ನು ಕಾಯಂ ಮಾಡಿ ವೇತನ ಹೆಚ್ಚಳ ಮಾಡಬೇಕು. ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡಬೇಕು. ಆದಾಯ ತೆರಿಗೆಯಿಂದ ಹೊರಗಿರುವ ಪ್ರತಿ ಕುಟುಂಬಕ್ಕೆ ಆರು ತಿಂಗಳವರೆಗೆ ಮಾಸಿಕ 7500ರೂ.ಗಳನ್ನು ನೇರ ನಗದು ವರ್ಗಾವಣೆ ಮಾಡಬೇಕು. ಸಾರ್ವಜನಿಕ ಉದ್ದಿಮೆಗಳು, ವಿದ್ಯುತ್ ಕ್ಷೇತ್ರ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ವಿವಿಧ ಬೇಡಿಕೆಗಳ ಪಟ್ಟಿಯನ್ನು ತಹಸೀಲ್ದಾರ್ ಗೋವಿಂದರಾಜು ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಕಳುಹಿಸಲಾಯಿತು. ಪ್ರತಿಭಟನೆಯಲ್ಲಿ ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಬಿಸಿಯೂಟ ಕಾರ್ಯಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಕಾವೇರಿ ಮತ್ತಿತರ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts