ಬಸ್ ಪ್ರಯಾಣ ದರ ಏರಿಕೆ ಮಾಡಿದ್ದಕ್ಕೆ ಖಂಡನೆ

blank

ನರಗುಂದ: ಬಸ್ ಪ್ರಯಾಣ ದರ ಶೇ. 15ರಷ್ಟು ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಎಬಿವಿಪಿ ನಗರ ಕಾರ್ಯದರ್ಶಿ ಅಭಿಷೇಕ ನವಲಗುಂದ ಮಾತನಾಡಿ, ಸರ್ಕಾರಿ ಬಸ್​ಗಳನ್ನೇ ಅವಲಂಬಿಸಿ ಪ್ರತಿನಿತ್ಯ ಲಕ್ಷಾಂತರ ಜನ ಬಡವರು, ಮಧ್ಯಮ ವರ್ಗದವರು, ಹಿರಿಯ ನಾಗರಿಕರು ತಮ್ಮ ವಿವಿಧ ಕೆಲಸ ಕಾರ್ಯಗಳಿಗೆ ಪ್ರಯಾಣಿಸುತ್ತಾರೆ. ಆದರೀಗ ಸರ್ಕಾರ ಏಕಾಏಕಿ ಬಸ್ ದರ ಏರಿಕೆ ಮಾಡಿ ಬಡವರು, ಸಾಮಾನ್ಯ ಕೂಲಿಕಾರ್ವಿುಕರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ. ಆರ್ಥಿಕ ಸಮಸ್ಯೆಯಿಂದ ಬಡವರು ಕುಟುಂಬಗಳ ನಿರ್ವಹಣೆಗೆ ಪರದಾಡುವಂತೆ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳಾ ಪ್ರಯಾಣಿಕರ ಸಂಚಾರ ಗಣನೀಯ ಪ್ರಮಾಣದಲ್ಲಿ ಏರಿಕೆ ಖಂಡಿದೆ. ಬಸ್ ಹಾಗೂ ಕುಳಿತುಕೊಳ್ಳಲು ಆಸನಗಳ ಕೊರತೆಯಿಂದ ಶಾಲಾ, ಕಾಲೇಜ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಕಷ್ಟು ತಾಪತ್ರಯ ಅನುಭವಿಸುವಂತಾಗಿದೆ. ಶಾಲಾ ಮಕ್ಕಳು ನಿಗದಿತ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬಸ್​ಗಳಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳಿಲ್ಲದೆ ಬಸ್​ಗಳನ್ನು ಮಾರ್ಗಮಧ್ಯದಲ್ಲಿ ನಿಲ್ಲಿಸಿದ ಪ್ರಸಂಗಗಳು ನಡೆಯುತ್ತಿವೆ. ಸರ್ಕಾರ ಕೂಡಲೇ ಬಸ್​ಗಳ ಸಂಖ್ಯೆ ಹೆಚ್ಚಿಸಿ ವಿದ್ಯಾರ್ಥಿಗಳು, ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ತಾಲೂಕು ಸಂಚಾಲಕ ಆಕಾಶ ಕಲಾಲ, ರುದ್ರೇಶ ಕೊಣ್ಣೂರ, ಮಲ್ಲನಗೌಡ ಹಿರೇಗೌಡ್ರ, ಆದಿತ್ಯ ಉಳ್ಳಾಗಡ್ಡಿ, ಅರುಣ ಮುಳ್ಳೂರ, ಇತರರಿದ್ದರು.

 

Share This Article

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…

ಮೊಬೈಲ್​​ ಪಕ್ಕದಲ್ಲಿಟ್ಟು ಮಲಗಿದ್ರೆ ಏನಾಗುತ್ತೆ? ಇಷ್ಟು ದಿನ ಅಂದುಕೊಂಡಿದ್ದೆಲ್ಲ ಸುಳ್ಳಾ? ಇಲ್ಲಿದೆ ಅಸಲಿ ಸಂಗತಿ! Mobile Addiction

Mobile Addiction : ಪ್ರಸ್ತುತ ಜೀವನಶೈಲಿಯಲ್ಲಿ ಮೊಬೈಲ್ ಫೋನ್‌ಗಳು ಹಲವರಿಗೆ ಅವಿಭಾಜ್ಯ ಅಂಗವಾಗಿದೆ. ಕೂತರು, ನಿಂತರು…