ನಂದಕುಮಾರ್‌ಗೆ ಶ್ರದ್ಧಾಂಜಲಿ ಅರ್ಪಣೆ

santhapa
ವಾಣಿ ಪಪೂ ಕಾಲೇಜಿನಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ ನಡೆಯಿತು. ಸಂಸ್ಥೆ ಗೌರವಾಧ್ಯಕ್ಷ ಎಚ್. ಪದ್ಮಗೌಡ, ಅಧ್ಯಕ್ಷ ಪಿ.ಕುಶಾಲಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ. ಮತ್ತಿತರರು ಇದ್ದರು.
Published on

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿದ್ದ ನಂದಕುಮಾರ್ ಅಲ್ಪಕಾಲದ ಅಸೌಖ್ಯದಿಂದ ದೈವಾಧೀನರಾಗಿದ್ದು, ಈ ಪ್ರಯುಕ್ತ ವಾಣಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ವತಿಯಿಂದ ಸಂತಾಪ ಸೂಚಕ ಸಭೆ ನಡೆಯಿತು.

ಸಂಸ್ಥೆ ಗೌರವಾಧ್ಯಕ್ಷ ಎಚ್.ಪದ್ಮಗೌಡ, ಅಧ್ಯಕ್ಷ ಪಿ.ಕುಶಾಲಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ., ಉಪಾಧ್ಯಕ್ಷರಾದ ಧರ್ನಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಯುವರಾಜ್ ಅನಾರ್ ಹಾಗೂ ಸಂಘದ ನಿರ್ದೇಶಕರು ಮತ್ತು ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಪ್ರೌಢಶಾಲಾ ಮುಖ್ಯಶಿಕ್ಷಕ ಲಕ್ಷ್ಮೀನಾರಾಯಣ.ಕೆ, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net