ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಸಮ್ಮೇಳನ ನಡೆಸಿ

ವಿರಾಜಪೇಟೆ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜು. 29ರಂದು ಅರಮೇರಿ ಕಳಂಚೇರಿ ಮಠದಲ್ಲಿ ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ತಾಲೂಕು ಅಧ್ಯಕ್ಷ ಮುಲ್ಲೆಂಗಡ ಮಧೋಶ್ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಕದನೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕದನೂರು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಸಾಹಿತ್ಯ ಸಮ್ಮೇಳನಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವುದರಿಂದ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವಂತಾಗುತ್ತದೆ. ಗ್ರಾಮದ ಎಲ್ಲ ಜನರು ಸಮ್ಮೇಳನದಲ್ಲಿ ಭಾಗವಹಿಸಿ ಕನ್ನಡದ ಕಂಪನ್ನು ನಾಡಿನುದ್ದಕ್ಕೂ ಪಸರಿಸುವಂತಾಗಬೇಕು ಎಂದು ತಿಳಿಸಿದರು.

ಸಮ್ಮೇಳನ ನಡೆಯುವ ಸ್ಥಳಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಗಮನ ಹರಿಸಿ ಸರಿಪಡಿಸುವಂತೆ ಪಿಡಿಒಗೆ ಸುಬ್ರಮಣಿ ಮನವಿ ಸಲ್ಲಿಸಿದರು.

ಪರಿಷತ್ ತಾಲೂಕು ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಸರ್ಕಾರದ ಅಂಗ ಸಂಸ್ಥೆಯಾಗಿದ್ದು ಸರ್ಕಾರದ ಇತಿಮಿತಿ ಹಾಗೂ ನಡವಳಿಗಳ ಮೂಲಕ ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ಸಮ್ಮೇಳನಗಳನ್ನು ನಡೆಸುವುದರಿಂದ ಗ್ರಾಮದಲ್ಲಿರುವ ಸಮಸ್ಯೆಗಳು ಬಹಿರಂಗವಾಗಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ತಲುಪಿಸುವ ಕೆಲಸ ಆಗುತ್ತದೆ. ಪ್ರತಿಯೊಬ್ಬರೂ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎನ್ ಶೋಭಾ, ಉಪಾಧ್ಯಕ್ಷೆ ತಟ್ಟಂಡ ರಾಣಿ, ತಾಲೂಕು ಪಂಚಾಯಿತಿ ಸದಸ್ಯೆ ಆಲತಂಡ ಸೀತಮ್ಮ, ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಮಣಿ, ಜಿಲ್ಲಾ ನಿರ್ದೇಶಕ ಪಳೆಯಂಡ ಪಾರ್ಥಚಿಣ್ಣಪ್ಪ, ಅಮ್ಮತ್ತಿ ಹೋಬಳಿ ಅಧ್ಯಕ್ಷ ಜಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ರತ್ನಾ ಮೈತಾಳ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *