ಕೋಲ್ಕತಾ: ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಕ್ಷಿಸಿದ್ದಾರೆ. ಸಿಬಿಐ ಅವರಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕೆಂದು ಬಿಜೆಪಿ ಮಂಗಳವಾರ(ಆಗಸ್ಟ್ 27) ಒತ್ತಾಯಿಸಿದೆ.
ಇದನ್ನು ಓದಿ: ಕದ್ದ ಎಂಬ ಕಾರಣಕ್ಕೆ ಖಾಸಗಿ ಭಾಗಕ್ಕೆ ಚಿಲ್ಲಿ ಪೌಡರ್ ಹಾಕಿದ್ರ! ವಿಡಿಯೋ ನೋಡಿದ್ರೆ ನಡುಕ ಹುಟ್ಟಿಸೋದು ಗ್ಯಾರಂಟಿ
ಬಿಜೆಪಿ ನಾಯಕ ಅಮಿತ್ ಮಾಳವಿಯಾ ಸಿಎಂ ಮಮತಾಬ್ಯಾನರ್ಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ಆ ರಾತ್ರಿ ಕೋಲ್ಕತಾ ಪೊಲೀಸ್ ಕಮಿಷನರ್ ಹೆಸರಿನಲ್ಲಿ ನೋಂದಾಯಿಸಲಾದ ಬೈಕನ್ನು ಓಡಿಸುತ್ತಿದ್ದ. ಅಲ್ಲದೆ ಮಹಿಳಾ ಟ್ರೈನಿ ವೈದ್ಯೆಯ ಪ್ರಕರಣವನ್ನು ಸೂಕ್ತ ತನಿಖೆ ನಡೆಸದೆ ಆತ್ಮಹತ್ಯೆ ಎಂದು ಘೋಷಿಸಿದ್ದು ಇದೇ ಆಯುಕ್ತರು. ಮಮತಾ ಬ್ಯಾನರ್ಜಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದೊಂದು ಗಂಭೀರ ವಿಚಾರವಾಗಿದ್ದು ತನಿಖೆಯಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ನಲ್ಲಿ ಆಗ್ರಹಿಸಿದ್ದಾರೆ.
ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಲು ಮಮತಾ ಬ್ಯಾನರ್ಜಿ ಮತ್ತು ಕೋಲ್ಕತಾ ಪೊಲೀಸ್ ಕಮಿಷನರ್ ಇಬ್ಬರೂ ತಕ್ಷಣವೇ ರಾಜೀನಾಮೆ ನೀಡಬೇಕು. ಸಿಬಿಐ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬೇಕು ಹಾಗೂ ಅವರ ಫೋನ್ ದಾಖಲೆಗಳನ್ನು ಪರಿಶೀಲಿಸಬೇಕು. ಈ ಪ್ರಕರಣದ ಹಿಂದಿನ ಪಿತೂರಿಯನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಮತ್ತು ಪೊಲೀಸ್ ಕಮಿಷನರ್ ವಿನೀತ್ ಗೋಯೆಲ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ಸಿಬಿಐ ನಡೆಸಬೇಕೆಂದು ಹೇಳಿದರು.
ಆ.9ರಂದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ನಡೆದ ಮಹಿಳಾ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ರಾಷ್ಟ್ರವ್ಯಾಪಿ ಆಕ್ರೋಶವನ್ನು ಹುಟ್ಟುಹಾಕಿತು. ಇದು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ಮುಷ್ಕರಗಳಿಗೆ ಕಾರಣವಾಯಿತು. (ಏಜೆನ್ಸೀಸ್)
ಗೋಮಾಂಸ ಶೇಖರಣೆ ಮಾಹಿತಿ ಮೇರೆಗೆ ಪೊಲೀಸರ ದಾಳಿ; ಪ್ಯಾನಿಕ್ ಅಟ್ಯಾಕ್ನಿಂದ ಮಹಿಳೆ ಸಾವು.. ಮುಂದೇನಾಯ್ತು