ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ: ವೆಂಕಟ್ ರಾಜಾ

blank

ಮಡಿಕೇರಿ: ಮಾ.೨೧ ರಿಂದ ಏ.೪ ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಶೇಕಡಾವಾರು ಉತ್ತೀರ್ಣ ಜೊತೆಗೆ ಕಳೆದ ಬಾರಿಯಂತೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಮತ್ತು ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.

ಪರೀಕ್ಷಾ ಮೌಲ್ಯ ಉಳಿಸಿಕೊಳ್ಳಬೇಕು. ಶಿಕ್ಷಕರೇ ಮಕ್ಕಳ ಬೇಸ್‌ಮೆಂಟ್ ಆಗಿದ್ದಾರೆ. ಆ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಜೊತೆಗೆ ಸಿಸಿಟಿವಿ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿವೆಯೇ ಎಂದು ಖಾತರಿ ಪಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಲೋಪಕಂಡು ಬರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಅಗತ್ಯವಿದ್ದಲ್ಲಿ ತಂಡ ರಚಿಸಿಕೊಂಡು ಸುಗಮ ಹಾಗೂ ಸುಲಲಿತವಾಗಿ ಪರೀಕ್ಷೆ ನಡೆಸಬೇಕು. ವೈದ್ಯಕೀಯ, ಪೊಲೀಸ್ ತಂಡ ನಿಯೋಜನೆ ಹೀಗೆ ಪ್ರತೀ ತಂಡಗಳು ಕಾರ್ಯನಿರ್ವಹಿಸಲಿವೆ. ಜತೆಗೆ ಪರೀಕ್ಷಾ ಕೇಂದ್ರದಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ೧೬೩ ಸೆಕ್ಷನ್ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಒಳ್ಳೆಯ ರೀತಿ ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ಅಳವಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿ ಇರಬೇಕು. ಪರೀಕ್ಷಾ ದಿನದಂದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿವಿಧ ಇಲಾಖೆಗಳು ಕರ್ತವ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ವಿದ್ಯಾರ್ಥಿಗಳು ಶ್ರಮಪಟ್ಟು ಓದಿರುತ್ತಾರೆ. ಅವರಿಗೆ ಅನ್ಯಾಯ ಆಗದಂತೆ ಗಮನಹರಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಂದಣಿಯಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮಾಹಿತಿ ನೀಡುವಂತಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪರೀಕ್ಷೆ ಎಂದರೆ ಭಯದ ವಾತಾವರಣ ನಿರ್ಮಾಣ ಮಾಡಬಾರದು. ಪಠ್ಯ ಪುಸ್ತಕ ಓದಿದವರು ಯಾವುದೇ ರೀತಿಯ ಒತ್ತಡ ಇಲ್ಲದೆ ಪರೀಕ್ಷೆ ಬರೆಯುತ್ತಾರೆ ಎಂದು ತಿಳಿಸಿದರು.

ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಮಾತನಾಡಿ, ಕೊಡಗು ಜಿಲ್ಲೆ ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಗುಣಮಟ್ಟದಲ್ಲಿ ಮೊದಲ ಸ್ಥಾನ ಪಡೆದಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮವಾಗಿ ತರುವ ನಿಟ್ಟಿನಲ್ಲಿ ಒತ್ತಡ ನಿವಾರಣೆ ಹಾಗೂ ಹಲವು ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ಮೊಟ್ಟ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ ೬,೬೨೨ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಉಳಿದಂತೆ ೩೭೫ ವಿದ್ಯಾರ್ಥಿಗಳು ರಿಪಿಟರ್ಸ್‌ ವಿದ್ಯಾರ್ಥಿಗಳು ಪರೀಕ್ಷೆಯ ಬರೆಯಲಿದ್ದಾರೆ. ಒಟ್ಟು ೬೯೯೭ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಮಡಿಕೇರಿ ತಾಲೂಕಿನಲ್ಲಿ ೧೮೮೧, ಸೋಮವಾರಪೇಟೆ ತಾಲೂಕಿನಲ್ಲಿ ೨,೮೫೫, ವಿರಾಜಪೇಟೆ ತಾಲೂಕಿನಲ್ಲಿ ೨೨೬೧ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಸತಿ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ೨೭ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ತಾಲೂಕಿನ ೮, ಸೋಮವಾರಪೇಟೆ ತಾಲೂಕಿನ ೧೧, ವಿರಾಜಪೇಟೆ ತಾಲೂಕಿನ ೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಇಂಟರ್‌ನೆಟ್ ಸಂಪರ್ಕ ಸಹಿತ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜೊತೆಗೆ ಇವರ ಕರ್ತವ್ಯ ಮತ್ತು ಜವಾಬ್ದಾರಿ ಬಗ್ಗೆ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಶಿಕ್ಷಣ ಅಧಿಕಾರಿ ಎಂ.ಮಹದೇವಸ್ವಾಮಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸ್ಥಾನಿಕ ಜಾಗೃತ ದಳದ ಶಿಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಮಾರ್ಗಾಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು ಇತರರು ಇದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…