More

    ಪ್ರಥಮ ಸೆಮಿಸ್ಟರ್ ಪತ್ರಿಕೆಗಳ ಮೌಲ್ಯಮಾಪನಕ್ಕೆ ಚಾಲನೆ

    ಕುಶಾಲನಗರ: ಕೊಡಗು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಮಹಾವಿದ್ಯಾಲಯಗಳಲ್ಲಿನ ಸ್ನಾತಕ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪತ್ರಿಕೆಗಳ ಮೌಲ್ಯಮಾಪನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

    ಮಡಿಕೇರಿಯ ಎಫ್‌ಎಂಕೆಎಂಸಿ ಕಾಲೇಜನ್ನು ಮೌಲ್ಯಮಾಪನ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕೊಡಗಿನ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಮೌಲ್ಯಮಾಪನಾ ಕಾರ್ಯದಲ್ಲಿ ಉತ್ಸಾಹದಿಂದ ಭಾಗಿಯಾಗಿದ್ದಾರೆ.

    ಮೌಲ್ಯಮಾಪಕಾರರನ್ನು ಉದ್ದೇಶಿಸಿ ಮಾತನಾಡಿದ ಕೊಡಗು ವಿಶ್ವವಿದ್ಯಾಲಯ ಕುಲಪತಿ ಡಾ.ಅಶೋಕ್.ಎಸ್.ಆಲೂರ, ನೂತನವಾಗಿ ಆರಂಭವಾದ ಕೊಡಗು ವಿಶ್ವವಿದ್ಯಾಲಯ ಸಾಂಘಿಕ ಪ್ರಯತ್ನದ ಮೂಲಕ ಯಶಸ್ವಿಯಾಗಿ ಸ್ನಾತಕ ಪದವಿ ಪರೀಕ್ಷೆ ನಡೆಸಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ವಿವಿ ಶ್ರಮಿಸಲಿದೆ ಎಂದು ತಿಳಿಸಿದರು.

    ಕುಲಸಚಿವ (ಮೌಲ್ಯಮಾಪನ) ಡಾ.ಸೀನಪ್ಪ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದವರಿಗೆ ಭವಿಷ್ಯದಲ್ಲಿ ಉನ್ನತ ವ್ಯಾಸಂಗ ಮತ್ತು ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ತೊಡಕಾಗಬಾರದೆಂಬ ಸದುದ್ದೇಶದಿಂದ ಮೌಲ್ಯಮಾಪನ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಸಂಯೋಜಕ ಪ್ರೊ.ರವಿಶಂಕರ್ ಅವರನ್ನೊಳಗೊಂಡ ತಂಡ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದೆ ಎಂದರು.

    ವಿವಿ ಸ್ನಾತಕ ಪದವಿ ಪರೀಕ್ಷಾ ಮೇಲ್ವಿಚಾರಕ ಪ್ರೊ.ರಾಘವ್, ಉಪ ಮೇಲ್ವಿಚಾರಕರಾದ ಡಾ.ಶೈಲಶ್ರೀ, ವಿವಿಧ ವಿಷಯವಾರು ಮೌಲ್ಯಮಾಪಕರು, ಆಡಳಿತ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts