20.8 C
Bangalore
Sunday, December 8, 2019

ಜಿಲ್ಲಾ ಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರಿಕೆ ಬಿಡುಗಡೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮೂಡಿಗೆರೆ: ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.18ರಿಂದ 19ರವರೆಗೆ ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ತಿಳಿಸಿದರು.

ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ 10 ಸಾವಿರ ಆಹ್ವಾನ ಪತ್ರಿಕೆ ಮುದ್ರಿಸಿದ್ದು, ಒಂಭತ್ತು ಸಾವಿರ ಕಸಾಪ ಸದಸ್ಯರ ವಿಳಾಸಕ್ಕೆ ನೇರವಾಗಿ ಆಹ್ವಾನ ಪತ್ರಿಕೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಸಮ್ಮೇಳನ ಆರಂಭದ ದಿನವಾದ ಬೆಳಗ್ಗೆ 7.30ಕ್ಕೆ ದಿ.ಪೂರ್ಣ ಚಂದ್ರತೇಜಸ್ವಿ ಮಹಾದ್ವಾರವನ್ನು ತಾಲೂಕು ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್, ದಿ.ಚಂದ್ರಯ್ಯನಾಯ್ಡು ಮಹಾಮಂಟಪವನ್ನು ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 8ಕ್ಕೆ ತಹಸೀಲ್ದಾರ್ ಪದ್ಮನಾಭಶಾಸ್ತ್ರಿ ರಾಷ್ಟ್ರಧ್ವಜಾರೋಹಣ, ಇಒ ಡಿ.ಡಿ.ಪ್ರಕಾಶ್ ನಾಡಧ್ವಜ, ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಪರಿಷತ್ ಧ್ವಜಾರೋಹಣ ನೆರವೇರಿಸುವರು. ನಂತರ ಪ್ರಮುಖ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಲೆಕ್ಕಪರಿಶೋಧಕ ಸಮಿತಿಯ ಪ್ರೊ. ಕೆ.ಎನ್.ಲಕ್ಷಿ್ಮೕಕಾಂತ್, ಸ್ವಾಗತ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ, ಕೋಶಾಧ್ಯಕ್ಷ ರಂಜನ್ ಅಜಿತ್​ಕುಮಾರ್, ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ರೈತಸಂಘದ ನಾಗೇಶ್, ಪ್ರೊ. ಎಂ.ಎಸ್.ಅಶೋಕ್, ಲಕ್ಷ್ಮಣ ಗೌಡ, ಶಿವಾನಂದ್, ಭಾನುಮತಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಸ್ವಾಮಿ ಇದ್ದರು.

ವಿವಿಧ ಗೋಷ್ಠಿಗಳ ಆಯೋಜನೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಧ್ಯಾಹ್ನ 2 ಗಂಟೆಗೆ ದೇಶೀಯ ಪ್ರಜ್ಞೆ, ಸಂಜೆ 4 ರಿಂದ ಸ್ತ್ರೀ ಪ್ರಜ್ಞೆ ಗೋಷ್ಠಿ, ಜ.19ರಂದು ಬೆಳಗ್ಗೆ 9.30ಕ್ಕೆ ಕಾವ್ಯಪ್ರಜ್ಞೆ, ಕವಿಗೋಷ್ಠಿ, 12 ಗಂಟೆಗೆ ಸಾಮುದಾಯಿಕ ಪ್ರಜ್ಞೆ, ಮಧ್ಯಾಹ್ನ 2.15 ಗಂಟೆಗೆ ಸಮ್ಮೇಳನಾಧ್ಯಕ್ಷ ಬದುಕು-ಬರಹ, ಬಹಿರಂಗ ಅಧಿವೇಶನ, 3.45ಕ್ಕೆ ಹಾಸ್ಯಪ್ರಜ್ಞೆ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 6 ಗಂಟೆಗೆ ಜಿಲ್ಲೆಯ ಸಾಧಕರಿಗೆ ಸನ್ಮಾನ, ಸಮಾರೋಪ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಜೆ, ಒಒಡಿ ಸೌಲಭ್ಯ: ಎರಡು ದಿನ ನಡೆಯುವ ಸಮ್ಮೇಳನಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಅನ್ಯಕಾರ್ಯ ನಿಮಿತ್ತ ರಜೆ ಹಾಗೂ ಒಒಡಿ ಸೌಲಭ್ಯ ನೀಡಲಾಗುವುದು. ಶಿಕ್ಷಕರು, ಬೇರೆ ಇಲಾಖೆಗಳಿಂದ ಅನುಮತಿ ಪಡೆದು ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವ ಇತರರಿಗೂ ಒಒಡಿ ಸೌಲಭ್ಯ ನೀಡಲಾಗುವುದು. ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಊಟದ ಟೋಕನ್ ವ್ಯವಸ್ಥೆ ಮಾಡಲಾಗಿದೆ.</

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...