More

    ಷಾ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಗೃಹ ಸಚಿವರ ಸಮ್ಮೇಳನ; ಆರಗ ಕೂಡ ಭಾಗಿ, ಚರ್ಚೆಯ ಪ್ರಮುಖ ವಿಷಯ ಇದು..

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ದೇಶದ ಎಲ್ಲ ರಾಜ್ಯಗಳ ಗೃಹ ಸಚಿವರನ್ನು ಒಳಗೊಂಡ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಭಾಗಿಯಾಗಲಿದ್ದಾರೆ.

    ‘ಚಿಂತನ‌ ಶಿಬಿರ’ ಎಂಬ ಹೆಸರಿನಲ್ಲಿ ಆಯೋಜಿಸಲಾಗಿರುವ ಈ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನವು ಹರಿಯಾಣದ ಸೂರಜ್‍ಕುಂಡ್‍ನಲ್ಲಿ ಅ.27 ಮತ್ತು 28ರಂದು ನಡೆಯಲಿದೆ.

    ಆಂತರಿಕ ಭದ್ರತೆ, ಸೈಬರ್ ಅಪರಾಧಗಳು ಮತ್ತು ನಿಯಂತ್ರಣ, ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಹಾಗೂ ಇನ್ನಿತರ ವಿಷಯಗಳ ಬಗ್ಗೆ ವಿಶೇಷ ಚರ್ಚೆ ಈ ಸಮ್ಮೇಳನದಲ್ಲಿ ನಡೆಯಲಿದೆ. ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿಸುವ ಕುರಿತಂತೆಯೂ ಗಂಭೀರವಾದ ಚರ್ಚೆ ನಡೆಯಲಿದೆ ಎಂದೂ ಹೇಳಲಾಗಿದೆ.

    ರಾಜ್ಯದಲ್ಲಿ ಅಪರಾಧಗಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ವೈಜ್ಞಾನಿಕ ಕ್ರಮಗಳು, ತನಿಖೆ ಕಾರ್ಯದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ ಬಗ್ಗೆ ಈ ಸಮ್ಮೇಳನದಲ್ಲಿ ರಾಜ್ಯದಿಂದ ವಿಷಯ ಮಂಡನೆ ಮಾಡಲಾಗುವುದು.

    ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಕೂಡ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಅಪರಾಧ ಚಟುವಟಿಕೆಗಳ ನಿಯಂತ್ರಣ, ಅಪರಾಧ ಪತ್ತೆ, ಸೈಬರ್ ಕ್ರೈಂ ಮುಂತಾದ ವಿಷಯಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಈ ಸಭೆಯಲ್ಲಿ ಪ್ರಾತ್ಯಕ್ಷಿಕೆ ನೀಡಲಿದ್ದಾರೆ.

    ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪರಾಧಿಗಳು ಕಾನೂನಿನ ಕುಣಿಕೆಯಿಂದ ನುಣುಚಿಕೊಳ್ಳದಂತೆ ಕ್ರಮ ಕೈಗೊಳ್ಳುವುದೂ ಸೇರಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ವಿಶೇಷ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

    ದೇಶದಲ್ಲಿಯೇ ಪ್ರಥಮ ಬಾರಿಗೆ, ಕರ್ನಾಟಕ ಸರ್ಕಾರ ಅಪರಾಧ ಸ್ಥಳ ಪರಿವೀಕ್ಷಣಾ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿದ್ದು, ವೈಜ್ಞಾನಿಕವಾಗಿ ಸಾಕ್ಷ್ಯ ಸಂಗ್ರಹ, ಸಾಕ್ಷ್ಯ ಸಂರಕ್ಷಣೆ ಹಾಗೂ ನ್ಯಾಯಾಲಯಕ್ಕೆ ಸಲ್ಲಿಕೆ ಪ್ರಕ್ರಿಯೆಗಳನ್ನು ನಡೆಸಲು, ವಿಶೇಷ ತರಬೇತಿ ನೀಡಲಾಗಿದೆ.

    ಮಾದಕ ವಸ್ತುಗಳ ವಿರುದ್ಧ ರಾಜ್ಯದಲ್ಲಿ ಅಭಿಯಾನದ ರೂಪದಲ್ಲಿ ಕಠಿಣ ಕ್ರಮ ಕೈಗೊಂಡಿದ್ದು, ಯುವ ಪೀಳಿಗೆ, ಮಾದಕ ವಸ್ತುಗಳ ಜಾಲಕ್ಕೆ ಬೀಳದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

    ‘ಕಾಂತಾರ’ಕ್ಕೀಗ ಕಾನೂನುಕ್ರಮದ ‘ಕಿರಿಕ್​’: ಯಶಸ್ಸಿನ ಓಟಕ್ಕೆ ಬ್ರೇಕ್​ ಹಾಕುವ ಯತ್ನವೋ?

    ಬರ್ತ್​ಡೇ ದಿನವೇ ಕೊಲೆಯಾದ ರೌಡಿಶೀಟರ್​; ಕೇಕ್​ ಕಟ್ ಮಾಡುವಾಗಲೇ ಅಟ್ಯಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts