More

    ಸಂಭ್ರಮ ಸಡಗರದಿಂದ ನಡೆದ ಸಮ್ಮೇಳನಾಧ್ಯಕ್ಷರ ಮೆರವಣಿಗೆ

    ರಾಣೆಬೆನ್ನೂರ: ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಎರಡು ದಿನಗಳ 13ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ನಿಮಿತ್ತ ಸರ್ವಾಧ್ಯಕ್ಷ ಜೆ.ಎಂ. ಮಠದ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಭಾನುವಾರ ಸಮ್ಮೇಳನದ ಮುಖ್ಯ ವೇದಿಕೆಗೆ ಕರೆತರಲಾಯಿತು.
    ಇಲ್ಲಿಯ ಸಿದ್ದೇಶ್ವರ ದೇವಸ್ಥಾನದ ಎದುರು ಸಾಹಿತಿ ಎ.ಬಿ. ರತ್ನಮ್ಮ ಹಾಗೂ ಸಂಗಡಿಗರು ನಾಡದೇವತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಡಿವೈಎಸ್ಪಿ ಗಿರೀಶ ಬೋಜಣ್ಣನವರ ಮೆರವಣಿಗೆಗೆ ಚಾಲನೆ ನೀಡಿದರು. ಇಲ್ಲಿಂದ ಆರಂಭಗೊಂಡ ಮೆರವಣಿಗೆಯು ಹಳೇ ಪಿ.ಬಿ. ರಸ್ತೆ, ಕುರಬಗೇರಿ ಕ್ರಾಸ್, ದುರ್ಗಾ ಸರ್ಕಲ್, ಎಂ.ಜಿ. ರಸ್ತೆ, ಪೋಸ್ಟ್ ವೃತ್ತ, ಅಶೋಕ ವೃತ್ತ ಮೂಲಕ ಎಪಿಎಂಸಿ ಆವರಣದಲ್ಲಿರುವ ಸಮಾರಂಭದ ಸ್ಥಳಕ್ಕೆ ಬಂದು ಸೇರಿತು.
    ವೀರಗಾಸೆ, ಡೊಳ್ಳು, ಸಮಾಳ, ಹಲಗೆ, ಆರ್ಕೆಸ್ಟ್ರಾ ಸೇರಿ ವಿವಿಧ ವಾದ್ಯ ಮೇಳಗಳು ಮೆರವಣಿಗೆಗೆ ಮೆರಗು ನೀಡಿದವು. ಶಾಲಾ ಮಕ್ಕಳು ಕನ್ನಡ ಬಾವುಟ ಹಿಡಿದು ಕನ್ನಡದ ಘೋಷಣೆ ಕೂಗುವ ಮೂಲಕ ಮೆರವಣಿಗೆಯಲ್ಲಿ ಗಮನ ಸೆಳೆದರು.
    ಇದಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಧ್ವಜಾರೋಹಣ ನೆರವೇರಿಸಿದರು.
    ಶಾಸಕ ಪ್ರಕಾಶ ಕೋಳಿವಾಡ, ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ, ವೀರೇಶ ಜಂಬಗಿ, ಚೋಳಪ್ಪ ಕಸವಾಳ, ಮೆರವಣಿಗೆ ಸಮಿತಿ ಅಧ್ಯಕ್ಷ ಪ್ರಕಾಶ ಬುರಡಿಕಟ್ಟಿ, ತಾ.ಪಂ. ಮಾಜಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ರವೀಂದ್ರಗೌಡ ಪಾಟೀಲ, ನಿತ್ಯಾನಂದ ಕುಂದಾಪುರ, ಏಕನಾಥ ಭಾನುವಳ್ಳಿ, ಪುಟ್ಟಪ್ಪ ಮರಿಯಮ್ಮನವರ, ಹನುಮಂತಪ್ಪ ಕಬ್ಬಾರ, ಮಂಜುನಾಥ ದುಗ್ಗತ್ತಿ, ಶ್ರೀನಿವಾಸ ಏಕಬೋಟೆ, ಬಿಇಒ ಎಂ.ಎಚ್. ಪಾಟೀಲ, ಆಯುಕ್ತ ನಿಂಗಪ್ಪ ಕುಮ್ಮಣ್ಣನವರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾಹಿತ್ಯಾಭಿಮಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts