More

    ಸಮ್ಮೇಳನ ಯಶಸ್ವಿಗೊಳಿಸುವ ತೀರ್ಮಾನ

    ಮುಗಳಖೋಡ: ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಡಿ. 22ರಂದು ಜರುಗಲಿರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಶೈಕ್ಷಣಿಕ ಕಾರ್ಯಾಗಾರ ಯಶಸ್ವಿಗೊಳಿಸಲು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

    ರಾಜ್ಯ ಪ್ರಾಥಮಿಕ ಶಾಲಾ ಸರ್ಕಾರಿ ದೈಹಿಕ ಶಿಕ್ಷಣ ಗ್ರೇಡ್-2 ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಬುರ್ಲಟ್ಟಿ ಮಾತನಾಡಿ, ರಾಜ್ಯಮಟ್ಟದ ಸಮಾವೇಶಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲ ತಾಲೂಕಿನ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಬೇಕು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 250 ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದರು.

    ರಾಯಬಾಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ವಸಂತ ಗಸ್ತಿ ಮಾತನಾಡಿ, ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಗಳಾದ ಮುಖ್ಯೋಪಾಧ್ಯಾಯರ ಹುದ್ದೆಗೆ ಪದೋನ್ನತಿ, ಸಹಾಯಕ ದೈಹಿಕ ಶಿಕ್ಷಣಾಧಿಕಾರಿ, ಸಹ ಶಿಕ್ಷಕರಿಗೆ ಸಿಗುವ ಎಲ್ಲ ಸೌಲಭ್ಯ ಪಡೆಯುವುದಕ್ಕಾಗಿ ಸಂಘಟಿತರಾಗೋಣ ಎಂದರು.

    ರಾಯಬಾಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಟಿ. ಅರಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ರಾಯಬಾಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ವಸಂತ ಗಸ್ತಿ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಗೇನೆನ್ನವರ, ಅಶೋಕ ಗಸ್ತಿ, ಎಂ.ಕೆ ಸಂಗಾನಟ್ಟಿ, ಕಂಟೆಪ್ಪನವರ, ಮುಖ್ಯಶಿಕ್ಷಕ ಎಂ.ಎಸ್. ಕಳ್ಳಿಗುದ್ದಿ, ಎಸ್.ಜಿ. ಮಲ್ಲಾಪುರ, ಎಸ್.ಬಿ.ತುಪ್ಪದ, ಸಿ.ಎಸ್.ಹಿರೇಮಠ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts