ಸಹಪಠ್ಯ ಚಟುವಟಿಕೆಯಿಂದ ಆತ್ಮವಿಶ್ವಾಸ

gan (1)
Published on

ಕುಂದಾಪುರ: ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೇತೃತ್ವ, ಸೃಜನಶೀಲತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಅನುಪಮಾ ಎಸ್.ಶೆಟ್ಟಿ ಹೇಳಿದರು.

ಕೋಟೇಶ್ವರದ ಗುರುಕುಲ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.

ಶಾಲಾ ಪ್ರಾಂಶುಪಾಲೆ ಡಾ.ರೂಪಾ ಶೆಣೈ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಂದ ಸ್ಕೇಟಿಂಗ್, ಕರಾಟೆ ಪ್ರದರ್ಶನ ನಡೆಯಿತು.

ಎಲ್ಲ ಸಹಪಠ್ಯ ಚಟುವಟಿಕೆ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಐಶ್ವರ್ಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net