More

  ಗೆಲ್ಲುವ ವಿಶ್ವಾಸವಿದೆ: ಎಸ್.ಪಿ.ದಿನೇಶ್

  ಮಡಿಕೇರಿ: ರಾಜ್ಯ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಎಸ್.ಪಿ.ದಿನೇಶ್ ತಿಳಿಸಿದರು.


  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ೨೦೧೨ ಮತ್ತು ೨೦೧೮ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದೆ. ಈ ಬಾರಿ ನನಗೆ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.


  ನಾನು ಈಗಾಗಲೇ ಶಿವಮೊಗ್ಗದ ಪದವೀಧರರ ಸಹಕಾರ ಸಂಘದ ಅಧ್ಯಕ್ಷನಾಗಿ, ದೇಶಿಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷನಾಗಿ, ಬಸವೇಶ್ವರ ವೀರಶೈವ ಸಮಾಜಸೇವಾ ಸಂಘದ ಗೌರವ ಕಾರ್ಯದರ್ಶಿಯಾಗಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಶಾಖೆಯ ಸಭಾಪತಿಯಾಗಿ ಹೀಗೆ ಅನೇಕ ಸಂಘ, ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ ಎಂದರು.

  ಈ ಬಾರಿ ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಆಯ್ಕೆಯಾದಲ್ಲಿ ಪದವೀಧರರಿಗೆ ಉದ್ಯೋಗ ದೊರಕಿಸಿಕೊಳ್ಳಲು ಸಾಧ್ಯವಿರುವ ಅತ್ಯಾಧುನಿಕವಾದ ನೆರವನ್ನು ನೀಡಲಾಗುವುದು. ಪದವೀಧರರ ಹಿತ ಕಾಯಲಾಗುವುದು ಎಂದು ಭರವಸೆ ನೀಡಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts