ವೀಣಾ ಕಾಶಪ್ಪನವರ್​​ ರೋಡ್​ ಶೋ ನೋಡಿ ಮೋದಿ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಘರ್ಷಣೆ

ಬಾಗಲಕೋಟೆ: ಮುಧೋಳ ತಾಲೂಕಿನ ಲೋಕಾಪುರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಲೋಕಾಪುರದಲ್ಲಿ ಇಂದು ಕಾಂಗ್ರೆಸ್​ ಅಭ್ಯರ್ಥಿ ವೀಣಾ ಕಾಶಪ್ಪನವರ ರೋಡ್​ ಶೋದಲ್ಲಿ ಪಾಲ್ಗೊಂಡ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ನರೇಂದ್ರ ಮೋದಿಯವರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಂತೆ ಗಲಾಟೆ ಶುರುವಾಗಿದೆ.

ಕಾಂಗ್ರೆಸ್​ ರೋಡ್​ ಶೋ ನೋಡುತ್ತಿದ್ದಂತೆ ಬಿಜೆಪಿಯವರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್​ ಕಾರ್ಯಕರ್ತರು ವಾಗ್ವಾದಕ್ಕೆ ಇಳಿದಿದ್ದಾರೆ. ಅಲ್ಲದೆ, ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದು ಗಲಾಟೆಗೆ ಕಾರಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟಿದ್ದಾರೆ.

Leave a Reply

Your email address will not be published. Required fields are marked *