More

    ಜಾತಿ-ಧರ್ಮದ ಹೆಸರಲ್ಲಿ ಸಂಘರ್ಷ ದೇವರಿಗೆ ಮಾಡುವ ಅವಮಾನ: ಹೀಗೆ ಹೇಳಿದ್ದು ಯಾರು ಗೊತ್ತಾ?

    ಬೆಂಗಳೂರು ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಎಡೆಮಾಡಿಕೊಡದೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು ಎಂದು ಹೇಳಿದರು.

    ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೇ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ. ಇದೇ ಕಾರಣದಿಂದ ಹಿಂದೆ ಒಮ್ಮೆ ದೇವಾಲಯದಲ್ಲಿ ಬಟ್ಟೆ ಬಿಚ್ಚಿ ಬನ್ನಿ ಎಂದಾಗ ದೇವಾಲಯದ ಹೊರಗಿನಿಂದಲೇ ಕೈ ಮುಗಿದಿದ್ದೆ ಎಂದು ಹೇಳಿದರು.

    ದಲಿತರಿಗೆ ದೇವಾಲಯ ನಿಷೇಧಿಸಿದ್ದ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು. ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿ ಕ್ರಾಂತಿ ಮಾಡಿದರು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts