More

    ಕಾಂಗ್ರೆಸ್‌ನದ್ದು ಗೊಂದಲದ ನಡೆ: ವಿಜಯೇಂದ್ರ ಟೀಕೆ

    ಶಿವಮೊಗ್ಗ: ಅಯೋಧ್ಯೆಯಲ್ಲಿ ಬಾಲ ರಾಮನ ಪ್ರತಿಷ್ಠಾಪನೆಯಾಗಿದೆ. ಇದು ಜನರ ಏಕತೆ ಮನೋಭಾವ ಹೆಚ್ಚಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಗೊಂದಲದ ನಡೆಯನ್ನು ಮುಂದುವರಿಸಿದೆ. ಅಯೋಧ್ಯೆಗೆ ತೆರಳಿದರೆ ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

    ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರಾೃನಂತರ ದೇಶದಲ್ಲಿನ ಭ್ರಷ್ಟಾಚಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಭ್ರಷ್ಟಾಚಾರದ ಸಣ್ಣ ಕುರುಹೂ ಇಲ್ಲದಂತಾಗಿದೆ. ಜನರು ಮೋದಿ ನಾಯಕತ್ವ ಒಪ್ಪಿದ್ದಾರೆ. ಹೀಗಾಗಿ ಮತ್ತೊಮ್ಮ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ನಂಬಿಕೊಂಡು ಕುಳಿತಿದೆ. ಸಿಎಂ ಸಿದ್ದರಾಮಯ್ಯ ಬಡವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ರೈತರ ಪಂಪ್‌ಸೆಟ್ ಸಕ್ರಮಕ್ಕೆ ರೈತರೇ ಹಣ ಭರಿಸುವ ಆದೇಶ ಮಾಡಲಾಗಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದತ್ತ ಮುಖ ಮಾಡುತ್ತಿರುವ ರಾಜ್ಯ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
    ಅನುಭವಿ ಮುಖ್ಯಮಂತ್ರಿಗೆ ರಾಜ್ಯದ ಆರ್ಥಿಕ ಸ್ಥಿತಿ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸುವುದಕ್ಕೆ ಸೀಮಿತವಾಗಿದೆ. ದಲಿತ ಹಾಗೂ ಅಭಿವೃದ್ಧಿ ವಿರೋಧಿ ಸರ್ಕಾರವಿದು ಎಂದು ಟೀಕಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts