More

    ಒಂದನೇ ತರಗತಿ ದಾಖಲಾತಿಗೆ ಮತ್ತೊಮ್ಮೆ ಗೊಂದಲ: ಆತಂಕದಲ್ಲಿ ಪಾಲಕರು

    ಬೆಂಗಳೂರು ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಕೇಂದ್ರ ಸರ್ಕಾರವು ಹೊರಡಿಸಿರುವ ಆದೇಶವು ಮತ್ತೊಮ್ಮೆ ಪಾಲಕರಲ್ಲಿ ಆತಂಕ ಸೃಷ್ಟಿಸಿದೆ.

    ಪ್ರಸಕ್ತ ಶೈಕ್ಷಣಿಕ ವರ್ಷ (2024-25)ದಿಂದಲೇ ಒಂದನೇ ತರಗತಿ ವಿದ್ಯಾರ್ಥಿಗಳ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿ ಕೇಂದ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶ ಹೊರಡಿಸಿದೆ.

    ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಉದ್ದೇಶದಿಂದ 2009ರಲ್ಲಿ ಜಾರಿಗೊಳಿಸಿರುವ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆ ಪ್ರಕಾರ ಒಂದನೇ ತರಗತಿಯ ಪ್ರವೇಶದ ವಯಸ್ಸಿನ ಮಿತಿಯನ್ನು 6 ವರ್ಷ ಕಾಪಾಡುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

    ಸದ್ಯ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಆರಂಭವಾಗುತ್ತಿದ್ದು, ಅದರ ಅನುಷ್ಠಾನದ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳ ವೈಯಕ್ತಿಕ ವಿಷಯವನ್ನು ಪರಿಶೀಲಿಸುವಂತೆ ವಿನಂತಿಸುತ್ತೇನೆ ಎಂದು ಎಲ್ಲ ರಾಜ್ಯ ಸರ್ಕಾರಗಳಿಗೂ ನಿರ್ದೇಶನ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts