More

  ಹೋರಾಟದ ಪರಿಸ್ಥಿತಿ ತಂದಿದೆ ಸರ್ಕಾರ

  ಹುಬ್ಬಳ್ಳಿ: ವಿವಿಧ ಸಂಘಟನೆಗಳು ಕರೆ ನೀಡಿರುವ ಸೆ. 29ರ ಕರ್ನಾಟಕ ಬಂದ್​ಗೆ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಈ ರೀತಿ ಜನ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತಂದಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಟೀಕಿಸಿದರು.

  ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಿತ್ಯ ತಮಿಳುನಾಡಿಗೆ ಕಾವೇರಿಯಿಂದ 10 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದಾಗ ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸಿದ್ದರೆ, ಈಗ ತಮಿಳುನಾಡಿಗೆ ನೀರು ಬಿಡುವ ಸ್ಥಿತಿ ಬರುತ್ತಿರಲಿಲ್ಲ ಎಂದರು.

  ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡಿಗೆ ಸಾಕಷ್ಟು ನೀರು ಬಿಡಲಾಗಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ನ್ಯಾಯ ದೊರೆಯುವವರೆಗೂ ಹೋರಾಟ ಮಾಡುತ್ತೇವೆ. ತಮಿಳುನಾಡು ಟ್ರಿಬ್ಯೂನಲ್ ಆದೇಶ ಉಲ್ಲಂಘಿಸಿದೆ ಎಂದು ತಿಳಿಸಿದರು.

  ಉತ್ತರ ಕರ್ನಾಟಕ ಭಾಗದಲ್ಲಿ ಬರಗಾಲವಿದೆ. ಮುಂಗಾರು ಬೆಳೆ ನಾಶವಾಗಿ ರೈತ ಕಂಗಾಲಾಗಿದ್ದಾರೆ. ಆದರೆ, ಪರಿಹಾರದ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ. ಬಿಜೆಪಿ ಸರ್ಕಾರವಿದ್ದಾಗ ಪ್ರವಾಹದಿಂದ ಬೆಳೆ ನಾಶ ಆಗಿದ್ದಾಗ ಅಂದಿನ ಸರ್ಕಾರ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ ಎಂದರು.

  ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಆಪರೇಶನ್​ಗೆ ಮುಂದಾಗಿದೆ. ಟಿಕೆಟ್ ದೊರೆಯದವರು ಕಾಂಗ್ರೆಸ್​ಗೆ ಹೋಗುತ್ತಿದ್ದಾರೆ. ಅದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಕಾಂಗ್ರೆಸ್​ಗೆ ಲಾಭವಿಲ್ಲ ಎಂದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts