More

  ಕಾವೇರಿ ವ್ಯಾಜ್ಯದಲ್ಲಿ ಮುಗ್ಗರಿಸಿದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಆಕ್ರೋಶ

  ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವ್ಯಾಜ್ಯದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸದೆ ರೈತರಿಗೆ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

  ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಈ ವ್ಯಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪದೇ ಪದೆ ಎಡವುತ್ತಿದೆ. ದುಡ್ಡು ಹೊಡೆಯಲು ಗಮನ ನೀಡಿ, ನೀರುಳಿಸುವುದನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

  ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಪ್ರಾಧಿಕಾರದಲ್ಲಿ ವಾದ ಮಾಡುವ ತಂಡವನ್ನು ಸರಿಯಾಗಿ ಸಜ್ಜುಗೊಳಿಸಿಲ್ಲ. ಕಾವೇರಿ ನೀರು, ರಾಜ್ಯದ ರೈತರನ್ನು ನಿರ್ಲಕ್ಷಿಸಿದ್ದರಿಂದಾಗಿ ಮತ್ತೆ 2.5 ಟಿಎಂಸಿ ಅಡಿ ಕಾವೇರಿ ಪ್ರಾಧಿಕಾರ ಸೂಚಿಸಿದೆ ಎಂದು ದೂರಿದರು.

  ಬಂಧನ ಪ್ರಯತ್ನ ಸರಿಯಲ್ಲ

  ವಿರೋಧ ಪಕ್ಷದ ಧ್ವನಿ ಹತ್ತಿಕ್ಕಲು ದಾವೆ ಹೂಡಲಾಗುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎ್ಐಆರ್ ದಾಖಲಿಸಿ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲವೆಂದು ಆರ್.ಅಶೋಕ್ ಆಕ್ಷೇಪಿಸಿದರು.

  ಕಾಂಗ್ರೆಸ್ ಶಾಸಕರು ಆವಾಜ್ ಹಾಕುವ, ಹಲ್ಲೆ ಮಾಡುವ ಎಷ್ಟೋ ಘಟನೆಗಳು ನಡೆದಿವೆ. ಕೆಂಗೇರಿ ಪೊಲೀಸ್ ಠಾಣೆಗೆ ಮೂವರು ನುಗ್ಗಿ ಪಿಎಸ್‌ಐ ಕಪಾಳಕ್ಕೆ ಹೊಡೆದಿದ್ದಾರೆ. ಅವರನ್ನು ಬಂಧಿಸದೆ ಬೈದವರನ್ನು ಬಂಧಿಸಲು ಮುಂದಾಗಿದ್ದು, ಸರ್ಕಾರದ ದ್ವಿಮುಖ ನೀತಿ ತೋರಿಸುತ್ತದೆ ಎಂದು ಹರಿಹಾಯ್ದರು.

  ರಸಗೊಬ್ಬರ ಪೂರೈಕೆಗೆ ಒತ್ತಾಯ

  ಬೆಂಗಳೂರು: ಮುಂಗಾರು ಮಳೆ ಬೀಳುತ್ತಿರುವ ಕಾರಣ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ಧರಾಗಿದ್ದಾರೆ. ಅಗತ್ಯ ಬೀಜ, ರಸಗೊಬ್ಬರ ಪೂರೈಸಬೇಕು. ರಸಗೊಬ್ಬರ ತಯಾರಿಕಾ ಕಂಪನಿಗಳ ಹಾಗೂ ಅಧಿಕಾರಿಗಳ ಸಭೆ ಕರೆದು ಕ್ರಮವಹಿಸಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

  ಬರಗಾಲದ ಬವಣೆಗೆ ಸಿಲುಕಿದ್ದ ರೈತರು ಮಳೆಯಿಂದ ಉಲ್ಲಸಿತರಾಗಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಕಡಿಮೆಯಿರುವ ಕಾರಣ ನೂಕು-ನುಗ್ಗಲು ಉಂಟಾಗಿದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ.

  ಮುಂಗಾರು ಹಂಗಾಮಿನಲ್ಲಿ ಹಾವೇರಿ ಜಿಲ್ಲೆಗೆ 35 ಸಾವಿರ ಟನ್ ರಸಗೊಬ್ಬರ ಅಗತ್ಯವಿದ್ದರೆ, ಈವರೆಗೆ 6,500 ಟನ್ ಪೂರೈಕೆಯಾಗಿದೆ. ಬಾಕಿಯಿರುವ ರಸಗೊಬ್ಬರ ಪೂರೈಸಬೇಕು. ಬೆಳೆ ನಷ್ಟ, ಸಾಲದ ಬಾಧೆ ತಾಳದೆ ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಮಾಜಿ ಸಿಎಂ ಬೊಮ್ಮಾಯಿ ನೆನಪಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts