More

    ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್​ ದೂರು! ಕಾರಣ ಹೀಗಿದೆ?

    ನವದೆಹಲಿ: ವಾರಣಾಸಿಯ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್,​​ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

    ಇದನ್ನೂ ಓದಿ: ಮಮತಾ ಬ್ಯಾನರ್ಜಿ ಕೋಟೆಯಲ್ಲಿ ಅರಳುತ್ತಾ ಕಮಲ?: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಲೆಕ್ಕಾಚಾರವೇನು?

    ಕಾಂಗ್ರೆಸ್ ಪ್ರಣಾಳಿಕೆಯು ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಅದೇ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆಯನ್ನು ಹೊಂದಿದೆ. ಈ ಮುಸ್ಲಿಂ ಲೀಗ್ ಪ್ರಣಾಳಿಕೆಯ ಉಳಿದ ಭಾಗಗಳಲ್ಲಿ ಎಡಪಂಥೀಯರು ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಿದ್ದಾರೆ ಎಂದು ಪ್ರಧಾನಿ ಕಳೆದ ವಾರ ಸಹರಾನ್‌ಪುರ ಮತ್ತು ಅಜ್ಮೀರ್‌ನಲ್ಲಿ ನಡೆದ ರ್ಯಾಲಿಗಳಲ್ಲಿ ಹೇಳಿದ್ದರು. ಈ ಹೇಳಿಕೆ ವಿರುದ್ಧ ಕಾಂಗ್ರೆಸ್​​ ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ದೂರು ನೀಡಿದೆ.

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್​ ಖಾತೆಯಲ್ಲಿ ಈ ಬಗ್ಗೆ ಹೇಳಿದ್ದಾರೆ. ನನ್ನ ಸಹೋದ್ಯೋಗಿಗಳಾದ @salman7khurshid, @Mukul Wasnik, @Pawankhera ಮತ್ತು @gurdeepsappal ಅವರು ಚುನಾವಣಾ ಆಯೋಗವನ್ನು ಭೇಟಿಯಾಗಿ 6 ​​ದೂರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

    ಎಲ್ಲಾ ಪಕ್ಷಗಳಿಗೆ ಸಮಾನವಾದ ವೇದಿಕೆಯನ್ನು ಕೇಂದ್ರ ಚುನಾವಣಾ ಆಯೋಗ ನೀಡಬೇಕು. ಆಯೋಗವು ತನ್ನ ಸ್ವಾತಂತ್ರ್ಯ ಪ್ರದರ್ಶಿಸುವ ಸಮಯ ಇದು. ತನ್ನ ಸಾಂವಿಧಾನಿಕ ಆದೇಶವನ್ನು ಎತ್ತಿಹಿಡಿಯುತ್ತದೆ ಎಂಬ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮಾತನಾಡಿ, ಪ್ರಧಾನಿ ಮೋದಿ ಅವರ ಭಾಷಣದಿಂದ ನಮಗೆ ತುಂಬಾ ಬೇಸರವಾಗಿದೆ. ನಮ್ಮ ಪ್ರಣಾಳಿಕೆಯ ಬಗ್ಗೆ ಅವರು ಹೇಳಿರುವುದು ಸುಳ್ಳಿನ ಕಂತೆ. ನೀವು ಎಲ್ಲಿ ಬೇಕಾದರೂ ನಮ್ಮ ಬಗ್ಗೆ ಮಾತನಾಡಬಹುದು. ಇದರಿಂದ ನಮ್ಮನ್ನು ವಿಭಜಿಸಬಹುದು. ಆದರೆ ರಾಷ್ಟ್ರೀಯ ಚಳವಳಿಯಲ್ಲಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ಮಟ್ಟದ ಕಾಂಗ್ರೆಸ್​ ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ನಾವು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಇಟ್ಟಿದ್ದೇವೆ ಮತ್ತು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಅವರಿಗೆ ವಿಶೇಷ ಮನವಿ ಮಾಡಿದ್ದೇವೆ ಎಂದು ಮಾಜಿ ಕೇಂದ್ರ ಸಚಿವ ಎಎನ್‌ಐಗೆ ತಿಳಿಸಿದ್ದಾರೆ.

    ಇದು ನಮ್ಮ ಜಾತ್ಯತೀತ ಸಮಾಜದ ಸ್ವಾತಂತ್ರ್ಯವನ್ನು ವಿರೋಧಿಸುವ ಪಕ್ಷಗಳ ಪ್ರಣಾಳಿಕೆಯಂತೆ ತೋರುತ್ತಿದೆ. ಈ ವಿಷಯದಿಂದ ನಾವು ತುಂಬಾ ದುಃಖಿತರಾಗಿದ್ದೇವೆ ಮತ್ತು ಪ್ರಧಾನಿಗೆ ಅಂತಹ ಮಾತನ್ನು ಹೇಳುವ ಹಕ್ಕು ಇಲ್ಲ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಾವು ಈ ವಿಷಯವನ್ನು ಚುನಾವಣಾ ಆಯೋಗದ ಮುಂದೆ ಇಟ್ಟಿದ್ದೇವೆ ಮತ್ತು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಅವರಿಗೆ ವಿಶೇಷ ಮನವಿ ಮಾಡಿದ್ದೇವೆ ಎಂದು ಮಾಜಿ ಕೇಂದ್ರ ಸಚಿವ ಎಎನ್‌ಐ ಉಲ್ಲೇಖಿಸಿದೆ.

    ಆಸ್ತಿ ಘೋಷಣೆ ಮಾಡಿದ ಡಾ.ಮಂಜುನಾಥ್‌: ಸ್ಥಿರಾಸ್ತಿ-ಚರಾಸ್ತಿ ಮೌಲ್ಯವೆಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts