More

    ‘ಕಾನೂನು ವಿರೋಧಿಯಾಗಿತ್ತು ಚುನಾವಣೆ ಬಾಂಡ್​ ಸ್ಕೀಂ ‘: ಸುಪ್ರೀಂ ತೀರ್ಪಿಗೆ ಕಾಂಗ್ರೆಸ್ ಪ್ರತಿಕ್ರಿಯೆ

    ನವದೆಹಲಿ: ರಾಜಕೀಯ ಪಕ್ಷಗಳಿಗೆ ಹಣ ನೀಡಲು ತಂದಿರುವ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಕಾಂಗ್ರೆಸ್ ಪಕ್ಷ ಸಂತಸ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಚುನಾವಣಾ ಆಯೋಗದ ರೀತಿ ಮತ್ತು ಕೇಂದ್ರ ಸರ್ಕಾರದ ನೀತಿಯನ್ನು ಟೀಕಿಸಿದೆ.

    ಇದನ್ನೂ ಓದಿ: ಹೃತಿಕ್ ರೋಷನ್ ಕಾಲಿಗೆ ಗಾಯ..ವಾರ್-2 ಎಫೆಕ್ಟಾ?

    ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಮೋದಿ ಸರ್ಕಾರ ಚುನಾವಣಾ ಬಾಂಡ್‌ಗಳನ್ನು ಕಮಿಷನ್​ ಅನ್ನು ಮಾಧ್ಯಮವನ್ನಾಗಿ ಬಳಕೆ ಮಾಡಿಕೊಂಡು ಸಂಗ್ರಹಿಸಲು ಹೊರಟಿತ್ತು. ಇದು ನ್ಯಾಯಾಲಯದಲ್ಲಿ ಸಾಬೀತಾಗಿದೆ ಎಂದು ಟೀಕಿಸಿದರು.

    ಮೋದಿ ಸರ್ಕಾರ ತಂದಿರುವ ಚುನಾವಣಾ ಬಾಂಡ್ ಯೋಜನೆಯು ಸಂಸತ್ತು ಮತ್ತು ಸಂವಿಧಾನ ಅಂಗೀಕರಿಸಿದ ಎರಡು ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್ (ಟ್ವಿಟರ್)’ ನಲ್ಲಿ ಬರೆದಿದ್ದಾರೆ.

    ದಾನಿಗಳಿಗೆ ವಿಶೇಷ ಸವಲತ್ತು ನೀಡುತ್ತಿರುವ ಮೋದಿ ಸರ್ಕಾರ ಪದೇ ಪದೆ ಜನರಿಗೆ ಅನ್ಯಾಯ ಮಾಡುತ್ತಿದೆ. ವಿವಿಪ್ಯಾಟ್‌ಗಳ ಸಮಸ್ಯೆಗಳ ಕುರಿತು ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲು ಚುನಾವಣಾ ಆಯೋಗವು ನಿರಾಕರಿಸುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಈ ವಿಷಯವನ್ನು ಪರಿಗಣಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಇಡೀ ಮತದಾನ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುತ್ತಿದ್ದರೆ, ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲು ಚುನಾವಣಾ ಆಯೋಗ ಏಕೆ ಹಠ ಮಾಡುತ್ತಿದೆ? ಚುನಾವಣಾ ಬಾಂಡ್‌ಗಳ ಯೋಜನೆಯು ಮಾಹಿತಿ ಹಕ್ಕು ಮತ್ತು ಆದಾಯ ತೆರಿಗೆ ಕಾಯಿದೆಗಳ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ ಈ ಅಸಾಂವಿಧಾನಿಕ ಚುನಾವಣಾ ಬಾಂಡ್‌ಗಳ ವಿತರಣೆಯನ್ನು ತಕ್ಷಣವೇ ನಿಲ್ಲಿಸುವಂತೆ ಎಸ್‌ಬಿಐಗೆ ಆದೇಶಿಸಲಾಗಿದೆ.

    4ನೇ ಸ್ಥಾನಕ್ಕೆ ಜಾರಿದ ಜಪಾನ್ ಆರ್ಥಿಕ ವ್ಯವಸ್ಥೆ: ಯೆನ್​ ದುರ್ಬಲವಾಗಿದ್ದು ಕಾರಣವೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts