More

    ಸಂಘದಿಂದ ಶಿಕ್ಷಕರಿಗೆ ಉತ್ತಮ ರೀತಿ ಸೇವೆ

    ಪಿರಿಯಾಪಟ್ಟಣ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕರಿಗೆ ಉತ್ತಮ ರೀತಿ ಸೇವೆಯನ್ನು ನೀಡುವುದರ ಮೂಲಕ ರಾಜ್ಯದಲ್ಲೇ ಮಾದರಿ ಎನಿಸಿದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್ ಹೇಳಿದರು.

    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಹಾಗೂ ಭೌತಿಕವಾಗಿ ಉತ್ತಮ ಪ್ರಗತಿ ಸಾಧಿಸಿರುವ ಶಾಲೆಗಳ ಶಿಕ್ಷಕರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಂಘ ಯಶಸ್ಸಿನ ಹಾದಿಯಲ್ಲಿದೆ ಎಂದು ತಿಳಿಸಿದರು.

    ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಬಿ.ಜಿ.ಶಿವರಾಜ್ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ ಶಾಲೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು.

    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಸಂಘ ಮೂರು ವರ್ಷಗಳಿಂದ ಶಿಕ್ಷಕರಿಗೆ ಪ್ರಾಮಾಣಿಕವಾಗಿ ಸೇವೆಗಳನ್ನು ನೀಡುತ್ತಾ ಬಂದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಸಹಕಾರದೊಂದಿಗೆ ಶಿಕ್ಷಕರಿಗೆ ಕ್ರಿಯಾಶೀಲ ಕೊಡುಗೆಗಳನ್ನು ನೀಡಿದೆ ಎಂದರು.

    ಶಾಲೆಗಳಿಗೆ ಪ್ರಶಸ್ತಿ: ಮೇಲೂರು, ಕಿರನೆಲ್ಲಿ, ಎಮ್ ಶೆಟ್ಟಳ್ಳಿ, ಹಿಟ್ನೆ ಹೆಬ್ಬಾಗಿಲು ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಕೊಟಯ್ಯನ ಕೊಪ್ಪಲು, ಕೊತ್ತವಳ್ಳಿ ಕೊಪ್ಪಲು, ಆಯಿರ ಬೀಡು ಗ್ರಾಮಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬೈಲಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಗಳಿಗೆ ಸಂಘದ ವತಿಯಿಂದ ‘ನಮ್ಮ ಶಾಲೆ ನಮಗೆ ಹೆಮ್ಮೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅರಳಿಮರದ ಕೊಪ್ಪಲು ಶಾಲೆಯ ಶಿಕ್ಷಕಿ ನಳಿನಾ ಹಾಗೂ ಜಿ.ಬಸವನಹಳ್ಳಿ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಲಾಯಿತು. ಉಚಿತವಾಗಿ ಕ್ಯಾಲೆಂಡರ್‌ಗಳನ್ನು ನೀಡಿದ ಉದ್ಯಮಿ ಬಿ.ಜೆ.ಬಸವರಾಜ್ ಅವರನ್ನು ಸನ್ಮಾನಿಸಲಾಯಿತು.

    ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಹದೇವಪ್ಪ, ನಿರ್ದೇಶಕರಾದ ಪುಷ್ಪಾಮೇರಿ, ಸೋಮಶೇಖರ್, ಪದಾಧಿಕಾರಿಗಳಾದ ಅಶೋಕ್, ವಿದ್ಯಾ, ಸಂತೋಷ್, ಕುಮಾರಿ, ರಜನಿ, ನಿಲುಫರ್, ಅನಿತಾ, ಮಧುರೇಶ್, ರಘು, ಯುವರಾಜ್, ಕಚೇರಿ ವ್ಯವಸ್ಥಾಪಕರಾದ ಮಧುಲತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts