More

  ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಹರಿದುಬಂತು ಅಭಿನಂದನೆಗಳ ಮಹಾಪೂರ!

  ಬೆಂಗಳೂರು: ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ​ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

  ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್​, ಸಿಟಿ ರವಿ, ಆರ್. ಅಶೋಕ್​, ಅಶ್ವತ್ಥ ನಾರಾಯಣ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಶುಭಕೋರಿದ್ದಾರೆ.

  ಅಂದಹಾಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್​, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇದೇ ತಪ್ಪು ಮರುಕಳಿಸಬಾರದು ಅಂತ ಅಳೆದು ತೂಗಿ, ತುಂಬಾ ಲೆಕ್ಕಾಚಾರ ಮಾಡಿ ಲಿಂಗಾಯತ ಸಮುದಾಯದ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದಂತಿದೆ. ಯಡಿಯೂರಪ್ಪರನ್ನು ಕಡಗಣಿಸಿದ್ದೇ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಎಂಬ ಚರ್ಚೆಗಳು ವ್ಯಾಪಕವಾಗಿ ಕೇಳಿಬಂದಿತ್ತು. ಅಲ್ಲದೆ, ಬಹುತೇಕ ಲಿಂಗಾಯತ ಮತಗಳು ಕಾಂಗ್ರೆಸ್​ ಪಾಲಾಗಿದ್ದವು. ಇದರಿಂದ ಎಚ್ಚೆತ್ತಿರುವ ಬಿಜೆಪಿ ಹೈಕಮಾಂಡ್​ ಬಿವೈ ವಿಜಯೇಂದ್ರರಿಗೆ ಮಣೆ ಹಾಕಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

  See also  ಬಸ್ ಆಟೋಗೆ ಡಿಕ್ಕಿ :ಆಟೋ ಚಾಲಕ ಸಾವು

  ಇದಕ್ಕೂ ಮುನ್ನ ರಾಜ್ಯಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ, ಅವರೆಲ್ಲರನ್ನು ಹಿಂದಿಕ್ಕಿ ಯುವ ನಾಯಕ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಶಕ್ತಿ ಏನೆಂಬುದನ್ನು ಅರಿತಂದಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts