More

    ಶಿಕ್ಷಣ ತಜ್ಞ ಕೆ.ಟಿ.ಚಂದುಗೆ ಅಭಿನಂದನೆ

    ಮದ್ದೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಹಾಗೂ ಸಮಾಜಮುಖಿ ಚಿಂತಕರಾದ ಕೆ.ಟಿ.ಚಂದು ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಆಯ್ಕೆ ಮಾಡಿರುವುದು ತಾಲೂಕಿಗೆ ಮತ್ತು ಜಿಲ್ಲೆಗೆ ಹೆಮ್ಮೆ ತರುವ ವಿಚಾರವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಪ್ರಶಂಸೆ ವ್ಯಕ್ತಪಡಿಸಿದರು.

    ತಾಲೂಕಿನ ಚನ್ನೇಗೌಡನದೊಡ್ಡಿ ಸ್ರಾಮದ ಕೆ.ಟಿ.ಚಂದು ಅವರ ನಿವಾಸದಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕೆ.ಟಿ.ಚಂದು ಅವರು ಶಿಕ್ಷಣ, ಸಾಹಿತ್ಯ, ಸಮಾಜಸೇವೆ, ಸಂಘಟನೆ, ಸಹಕಾರ ಕ್ಷೇತ್ರ ಸೇರಿದಂತೆ ತಾಲೂಕಿಗೆ ಅಪಾರ ಕೊಡುಗೆ ನೀಡಿದ್ದಾರೆ. ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಇಂಥವರಿಗೆ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವುದು ಪ್ರಶಸ್ತಿಗೂ ಮೌಲ್ಯ ಬಂದಂತಾಗಿದೆ ಎಂದರು.

    ಮುಂದಿನ ದಿನಗಳಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿ ಕೆ.ಟಿ. ಚಂದು ಅವರನ್ನು ಅಭೂತಪೂರ್ವವಾಗಿ ಅಭಿನಂದಿಸಲಾಗುವುದು ಎಂದು ತಿಳಿಸಿದರು.

    ಕಸಾಪ ತಾಲೂಕು ಘಟಕದ ಅಧ್ಯಕ್ಷ ವಳಗೆರೆಹಳ್ಳಿ ವಿ.ಸಿ.ಉಮಾಶಂಕರ್ ಮಾತನಾಡಿ, ಸಮಾಜ ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಚಿಂತನಶೀಲರಾಗಿರುವ ಕೆ.ಟಿ. ಚಂದು ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ರಾಜ್ಯ ಸರ್ಕಾರ ಇಂತಹ ಸಮಾಜಮುಖಿ ಚಿಂತಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹರ್ಷವ್ಯಕ್ತಪಡಿಸಿದರು.

    ಕಸಾಪ ತಾಲೂಕು ಘಟಕದ ಗೌರವಾಧ್ಯಕ್ಷ ವಿ.ಎಚ್.ಶಿವಲಿಂಗಯ್ಯ, ಉಪಾಧ್ಯಕ್ಷ ತಿಪ್ಪೂರು ರಾಜೇಶ್, ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅಪೂರ್ವ ಚಂದು, ಪ್ರಾಂಶುಪಾಲ ಯು.ಎಸ್.ಶಿವಕುಮಾರ್, ಪತ್ರಕರ್ತರಾದ ಅಂಬರಹಳ್ಳಿ ಸ್ವಾಮಿ, ಬಿ.ಎ.ಮಧುಕುಮಾರ, ಮುಖಂಡರಾದ ಶ್ರೀನಿವಾಸು ಮಹಾಲಿಂಗ, ಕೆ.ಜಿ.ಉಮೇಶ್, ಸಕ್ಕರೆ ನಾಗರಾಜು, ಮಹೇಂದ್ರ, ರವಿ, ಜಗದೀಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts