

ಶಿರ್ವ: ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಗೊಂಡ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಕುತ್ಯಾರು ಅಶೋಕ್ ಗೌಡ್ರು ನಿವಾಸದಲ್ಲಿ ಸೋಮವಾರ ಗೌರವಿಸಲಾಯಿತು.
ಬಳಿಕ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಯಕರ್ತನಾಗಿ ವಿಶೇಷವಾಗಿ ಸೇವೆ ನೀಡಿದ ನವೀನ್ ರಾಜಕೀಯ ಬದುಕಿನ ಮುನ್ನುಡಿ ಬರೆದವರು. ಇದೊಂದು ಉತ್ತಮ ಅವಕಾಶ, ಸತ್ವ ಪರೀಕ್ಷೆಯ ಕಾಲವಾಗಿದೆ ಎಂದರು.
ಕುತ್ಯಾರು ನವೀನ್ ಶೆಟ್ಟಿ ವಾತನಾಡಿದರು. ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಜನಾರ್ದನ ಆಚಾರ್ಯ, ಪ್ರಮುಖರಾದ ಜಿನೇಶ್ ಬಲ್ಲಾಳ್, ಬೂತ್ ಕಾರ್ಯದರ್ಶಿ ಪೂರ್ಣಚಂದ್ರ, ಹಿರಿಯ ಕಾರ್ಯಕರ್ತ ಸತೀಶ್ ಕುತ್ಯಾರು, ಬೂತ್ ಮಟ್ಟದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು. ಬೂತ್ ಅಧ್ಯಕ್ಷ ಧೀರಜ್ ಕುಲಾಲ್ ಸ್ವಾಗತಿಸಿದರು. ಗ್ರಾ.ಪಂ. ಸದಸ್ಯೆ ಲತಾ ಆಚಾರ್ಯ ವಂದಿಸಿದರು. ಕುತ್ಯಾರು ಪ್ರಸಾದ್ ಶೆಟ್ಟಿ ನಿರೂಪಿಸಿದರು.