ವಾಮನರಾವ್ ಬೇಕಲ ದಂಪತಿಗೆ ಅಭಿನಂದನೆ

New Project (15)
Published on

ಕಾಸರಗೋಡು: ಕನ್ನಡ ಭವನ ಗ್ರಂಥಾಲಯ ಸ್ಥಾಪಿಸಿ 23 ವರ್ಷಗಳಿಂದ ಕನ್ನಡ ಚಟುವಟಿಕೆ ಹಮ್ಮಿಕೊಳ್ಳುವುದರೊಂದಿಗೆ ಕರ್ನಾಟಕದಿಂದ ಬರುವ ಕನ್ನಡಿಗರಿಗೆ ತಮ್ಮ ಮನೆಯಲ್ಲೇ ಉಚಿತ ವಸತಿ ಕಲ್ಪಿಸಿರುವ ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯದ ಅಧ್ಯಕ್ಷ ವಾಮನರಾವ್ ಬೇಕಲ ಅವರನ್ನು ನುಳ್ಳಿಪಾಡಿಯ ಕನ್ನಡ ಭವನ ಗ್ರಂಥಾಲಯದಲ್ಲಿ ಕಸಾಪ ಕೇರಳ ಗಡಿನಾಡ ಘಟಕ ಅಭಿನಂದಿಸಿತು. ಕಸಾಪ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಯನ್ನು ಗೌರವಿಸಿದರು. ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ , ಸಾಹಿತಿ ಸುಕುಮಾರ ಆಲಂಪಾಡಿ, ಬಿಇಎಂ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ರಾಜೇಶ್ಚಂದ್ರ ಕೆ.ಪಿ.ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net