ಹದಿನೈದು ದಿನಗಳಲ್ಲೇ ಹೊಸ ವಿಭಾಗ ಆರಂಭ : ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಭರವಸೆ

New Project (10)
Published on

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

ಶ್ರೀ ದೇವಳ ಆಡಳಿತದಲ್ಲಿರುವ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರಸಕ್ತ ವರ್ಷವೇ ಹೊಸ ವಿಭಾಗಗಳನ್ನು ಆರಂಭಿಸಲು ಶ್ರಮಿಸುತ್ತಿದ್ದು, ಹದಿನೈದು ದಿನಗಳಲ್ಲೇ ಕಾರ್ಯಗತಗೊಳಿಸಲು ಶತಪ್ರಯತ್ನ ಮಾಡುತ್ತೇವೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದರು.

ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗೂ ಅವಕಾಶ, ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಈ ಕುರಿತು ಈಗಾಗಲೇ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದ್ದು, ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಭೇಟಿ ಮಾಡಿ ಮನವರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಅವರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಜತೆಗೆ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸೌಮ್ಯಾ ಭರತ್ ಸುಬ್ರಹ್ಮಣ್ಯ ಅವರನ್ನು ಅಭಿನಂದಿಸಲಾಯಿತು. ಟ್ರಸ್ಟ್‌ನ ಅಧ್ಯಕ್ಷ ಡಾ.ರವಿ ಕಕ್ಕೆಪದವು, ಪದಾಧಿಕಾರಿಗಳಾದ ಗೀತಾ.ಆರ್.ಕಕ್ಕೆಪದವು, ಸುರೇಶ್ ಕಕ್ಕೆಪದವು, ರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಕಕ್ಕೆಪದವು ಸಹಿತ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

ಟ್ರಸ್ಟ್‌ನಿಂದ ಮನವಿ

ಭಕ್ತರ ಅನುಕೂಲಕ್ಕಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ ಆಶ್ಲೇಷ ಬಲಿ ಮಂಟಪ ನಿರ್ಮಾಣ ಸಹಿತ ವಿವಿಧ ಬೇಡಿಕೆಗಳನ್ನು ಡಾ.ರವಿ ಕಕ್ಕೆಪದವು ಟ್ರಸ್ಟ್ ಮೂಲಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದು, ಇದಕ್ಕೆ ಅಧ್ಯಕ್ಷರು ಪೂರಕವಾಗಿ ಸ್ಪಂದಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net