More

    ಶಿಕ್ಷಣ ಕ್ಷೇತ್ರ ಕೆಟ್ಟರೆ ಸಮಾಜದ ಸ್ವಾಸ್ಥ್ಯವೇ ಹಾಳು: ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್ ಅಭಿಮತ

    ಪಾಂಡವಪುರ: ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳು ಕೆಟ್ಟರೆ ಇಡೀ ಸಮಾಜದ ಸ್ವಾಸ್ಥ್ಯ ಹದಗೆಡಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್ ಹೇಳಿದರು.
    ಪಟ್ಟಣದ ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ತಾಲೂಕು ಶಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಮತ್ತು ಶಿಕ್ಷಣ ಅತಿ ಮುಖ್ಯ. ಹೀಗಾಗಿ ಎರಡು ಕ್ಷೇತ್ರಗಳು ಕೆಡದಂತೆ ನೋಡಿಕೊಳ್ಳಬೇಕು. ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪೂರೈಕೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.
    ಈ ಹಿಂದೆ ಬಿಇಒ ಆಗಿ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುವಾಗ ಅಂದಿನ ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು ಅವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಪಟ್ಟಣದ ಫ್ರೆಂಚ್‌ರಾಕ್ಸ್ ಶತಮಾನ ಶಾಲೆಯನ್ನು ಉನ್ನತೀಕರಿಸಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಜತೆಗೆ ಉತ್ತಮ ಸರ್ಕಾರಿ ಶಾಲೆ ಎಂಬ ಪ್ರಶಸ್ತಿ ಪಡೆದುಕೊಳ್ಳಲಾಗಿತ್ತು. ಈಗಲೂ ಪ್ರತಿಯೊಬ್ಬರೂ ಸಹಕಾರ ನೀಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರಲಾಗುವುದು. ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಆಶಯ ಕೂಡ ಇದೇ ಆಗಿದೆ ಎಂದು ತಿಳಿಸಿದರು.
    ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್.ಪ್ರಕಾಶ್, ಸರ್ವಶಿಕ್ಷಣ ಅಭಿಯಾನದ ಸಹಾಯಕ ಯೋಜನಾಧಿಕಾರಿ ಸಿ.ಎನ್.ಗೋಪಾಲೇಗೌಡ ಮಾತನಾಡಿದರು. ಟ್ರಸ್ಟ್‌ನ ತಾಲೂಕು ಅಧ್ಯಕ್ಷ ಎಸ್.ಮಲ್ಲಿಕಾರ್ಜುನಗೌಡ, ಕಾರ್ಯಾಧ್ಯಕ್ಷ ಹಾರೋಹಳ್ಳಿ ಧನ್ಯಕುಮಾರ್, ಉಪಾಧ್ಯಕ್ಷ ಬಿ.ಎಸ್.ಜಯರಾಮ್, ಸಂಘಟನಾ ಕಾರ್ಯದರ್ಶಿ ಕೋ.ಪು.ಗುಣಶೇಖರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts