More

    ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿವಂದನೆ ಸಭೆ

    ಗಂಗೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿವಂದನೆ ಹಾಗೂ ವಿಧಾನಪರಿಷತ್ ಚುನಾವಣೆ ಸಿದ್ಧತಾ ಸಭೆ ಕುಂದಾಪುರದಲ್ಲಿ ಬುಧವಾರ ನಡೆಯಿತು.
    ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ ಶೆಟ್ಟಿ, ಮುಖಂಡರಾದ ಪ್ರಕಾಶ್‌ಚಂದ್ರ ಶೆಟ್ಟಿ ಖಂಬದಕೋಣೆ, ದಿನೇಶ್ ಹೆಗ್ಡೆ ಮೊಳಹಳ್ಳಿ, ಅಶೋಕ್ ಪೂಜಾರಿ ಬೀಜಾಡಿ, ಶಿವರಾಮ ಶೆಟ್ಟಿ ಮಲ್ಯಾಡಿ, ಕೃಷ್ಣದೇವ ಕಾರಂತ ಕೋಣಿ, ಜಯರಾಮ ಶೆಟ್ಟಿ ಬೆಳ್ವೆ, ರೋಶನ್ ಶೆಟ್ಟಿ ಉಪಸ್ಥಿತರಿದ್ದರು.

    ಪದವೀಧರ ಕ್ಷೇತ್ರಕ್ಕೆ ವಿನೋದ್ ಕ್ರಾಸ್ಟೊ, ಶಿಕ್ಷಕರ ಕ್ಷೇತ್ರಕ್ಕೆ ಸೀತಾರಾಮ ಶೆಟ್ಟಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಯಿತು. ಚಂದ್ರ ಅಮೀನ್ ಸ್ವಾಗತಿಸಿದರು. ನಾರಾಯಣ ಆಚಾರ್ ಕೋಣಿ ವಂದಿಸಿದರು. ಆಶಾ ಕರ್ವಾಲೊ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts