ಸೆ.9ರಂದು ನಗರದಲ್ಲಿ ಅಭಿನಂದನಾ ಸಮಾರಂಭ: ಸಮಿತಿ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ಮಾಹಿತಿ

1 (1)
Published on

ಮಂಡ್ಯ: ಸಾಹಿತಿ, ಗಮಕಿ ಹಾಗೂ ಎಲ್ಐಸಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಡಾ.ಎಸ್.ಶ್ರೀನಿವಾಸ ಶೆಟ್ಟಿ ಅವರ ಅಭಿನಂದನೆ ಹಾಗೂ ಅಭಿನಂದನಾ ಗ್ರಂಥ ಸಮರ್ಪಣೆ ಸಮಾರಂಭವನ್ನು ನಗರದಲ್ಲಿ ಸೆ.9ರಂದು ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ ತಿಳಿಸಿದರು.

ಶ್ರೀನಿವಾಸಶೆಟ್ಟರ ಬಗ್ಗೆ ಒಡನಾಡಿ, ಹಿತೈಷಿ, ಅಭಿಮಾನಿ ಹಾಗೂ ಸಾರ್ವಜನಿಕರು ಬರೆದಿರುವ ಲೇಖನಗಳನ್ನು ಒಳಗೊಂಡ 480 ಪುಟಗಳ ಸುಮನಸ ಅಭಿನಂದನಾ ಗ್ರಂಥವನ್ನು ಸಾಹಿತಿ ಡಾ.ಪ್ರದೀಪ್‌ಕುಮಾರ್ ಹೆಬ್ರಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಹೊರತರಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಅಂದು ಸಂಜೆ 5 ಗಂಟೆಗೆ ಆಯೋಜಿಸಿರುವ ಸಮಾರಂಭವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸುವರು. ಹೈಕೋರ್ಟ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್ ಅಧ್ಯಕ್ಷತೆ ವಹಿಸುವರು ಎಂದರು.

ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಬಿ.ಟಿ.ಜಯರಾಮ, ಇಂದಿರಾ ಸತೀಶ್‌ಬಾಬು, ಸಿ.ಎಂ.ಉಮೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net