ಗುಣಮಟ್ಟದ ಶಿಕ್ಷಣ ಎಕ್ಸೆಲ್ ಧ್ಯೇಯ : ಸುಮಂತ್ ಕುಮಾರ್ ಜೈನ್ ಮಾಹಿತಿ

New Project (3)
Published on

ಬೆಳ್ತಂಗಡಿ: ಸರ್ಕಾರಿ ಶಾಲೆ ಮತ್ತು ಉಜಿರೆ ಸಿದ್ಧವನದಲ್ಲಿ ಪಡೆದ ಶಿಕ್ಷಣ ಸಾಧನೆಗೆ ಕಾರಣ. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಉತ್ತಮ ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎಂಬುದೇ ಎಕ್ಸೆಲ್ ಕಾಲೇಜಿನ ಉದ್ದೇಶ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್‌ಕುಮಾರ್ ಜೈನ್ ತಿಳಿಸಿದರು.

ರಾಜ್ಯದ ನಂ.1 ಪತ್ರಿಕೆ ವಿಜಯವಾಣಿ ನೀಡಿರುವ ವಿಜಯರತ್ನ ಪ್ರಶಸ್ತಿ ಸ್ವೀಕರಿಸಿದ ಹಿನ್ನೆಲೆ ಬಳಂಜ ಶಿಕ್ಷಣ ಟ್ರಸ್ಟ್, ಬಳಂಜ ಶಾಲಾಭಿವೃದ್ಧಿ ಸಮಿತಿ ಮತ್ತು ಇತರ ಸಂಘ ಸಂಸ್ಥೆಗಳ ವತಿಯಿಂದ ಶನಿವಾರ ಎಕ್ಸೆಲ್ ಕಾಲೇಜು ಅರಮಲೆಬೆಟ್ಟ ಕ್ಯಾಂಪಸ್‌ನಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬಳಂಜ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಲೋಚನಾ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳ ಬೆಳವಣಿಗೆ ಸುಮಂತ್ ಕುಮಾರ್ ಜೈನ್ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್, ಪ್ರಮೋದ್ ಕುಮಾರ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net