

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಬಿಜೆಪಿ ಬಂಟ್ವಾಳ ಮಂಡಲದ ನೂತನ ಅಧ್ಯಕ್ಷರ ಪದ ಸ್ವೀಕಾರ ಹಾಗೂ ಸಂಸದ ಬ್ರಿಜೇಶ್ ಚೌಟ ಹಾಗೂ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಭಿನಂದನಾ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡಿನಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನೈಾಕ್ ಮಾತನಾಡಿ, ಪಕ್ಷದ ಕಾರ್ಯಕರ್ತರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಿದಾಗ ಪಕ್ಷವನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ. ಪ್ರಸ್ತುತ ಪಕ್ಷವನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸಲು ಪದಾಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಪಕ್ಷ ಬಲಾಢ್ಯವಾಗಿ ಬೆಳೆದಿದ್ದು ಪೂರ್ಣ ಪ್ರಮಾಣದಲ್ಲಿ ಪಕ್ಷಕ್ಕಾಗಿ ದುಡಿಯುವ ಅನಿವಾರ್ಯ ಸ್ಥಿತಿ ಎದುರಾಗಿದೆ ಎಂದರು.
ಅಭಿನಂದನೆ ಸ್ವೀಕರಿಸಿದ ಸಂಸದ ಬೃಜೇಶ್ ಚೌಟ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋತವರು ಆಡಳಿತ ನಡೆಸುತ್ತಿದ್ದಾರೆ ಅಧಿಕಾರಿಗಳ ಮೀಟಿಂಗ್, ವರ್ಗಾವಣೆಗಳು, ಸೋತವರ ಲೆಟರ್‌ನಲ್ಲಿ ನಡೆಯುತ್ತಿದೆ. ಹಿಟ್ಲರ್ ಹಾಗೂ ಟಿಪ್ಪುವಿನ ಮಾದರಿಯ ಆಡಳಿತ ಇಲ್ಲಿದೆ ಕಾರ್ಯಕರ್ತರನ್ನು ಜೋಡಿಸಿಕೊಂಡು ಹೊಸ ಯುವಕರನ್ನು ಪಕ್ಷಕ್ಕೆ ತರುವ ಕಾರ್ಯ ಆಗಬೇಕಿದೆ ಎಂದರು.
ಕೇಂದ್ರದ ಅನುದಾನದಡಿ 5.27 ಕೋಟಿ ರೂ.ವೆಚ್ಚದಲ್ಲಿ ಪೊಳಲಿ, ಕಲ್ಲಡ್ಕ, ವೀರಕಂಭ, ಸಾಲೆತ್ತೂರು-ಕಟ್ಟತ್ತಿಲ್ಲ ರಸ್ತೆಗಳಿಗೆ ಶುಕ್ರವಾರ ಸಂಜೆ ಗುದ್ದಲಿ ಪೂಜೆ ನೆರವೇರಲಿದೆ ಎಂದರು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಆರ್. ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪಕ್ಷದ ಪ್ರಮುಖರಾದ ಅಪ್ಪಯ್ಯ ಮಣಿಯಾಣಿ, ಸಾಜಾ ರಾಧಕೃಷ್ಣ ಆಳ್ವ, ವಿಕಾಸ್ ಪುತ್ತೂರು, ಪ್ರೇಮನಂದ ಶೆಟ್ಟಿ, ಯತೀಶ್ ಆಳ್ವ, ಪೂಜಾ ಪೈ, ದೇವಪ್ಪ ಪೂಜಾರಿ, ಸುಲೋಚನಾ ಜಿ.ಕೆ.ಭಟ್ ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು, ರಾಜೇಶ್ ಕೊಟ್ಟಾರಿ ನಿರೂಪಿಸಿದರು.