More

    ಬಿಜೆಪಿಯ ಪ್ರಣಾಳಿಕೆ ಓದುವುದು ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ! ಕಾಂಗ್ರೆಸ್ ಟ್ವೀಟ್

    ಬೆಂಗಳೂರು: ಬಿಜೆಪಿಯ ಪ್ರಣಾಳಿಕೆ ಓದುವುದು, ಸತ್ತ ಮಗನ ಜಾತಕ ಓದುವುದು ಎರಡೂ ಒಂದೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರುದ್ಧ ಕಿಡಿಕಾರಿದೆ.

    ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪಕ್ಷ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ಕಾಂಗ್ರೆಸ್‌ ‘ಗ್ಯಾರಂಟಿ’ ಯೋಜನೆಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದೆ.

    ಇದನ್ನೂ ಓದಿ: ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು

    ಇದೀಗ ಬಿಜೆಪಿ ಪ್ರಣಾಳಿಕೆಯನ್ನು ಲೇವಡಿ ಮಾಡಿರುವ ಕಾಂಗ್ರೆಸ್, ಕಳೆದ ಬಾರಿ ಅನ್ನಪೂರ್ಣ ಕ್ಯಾಂಟೀನ್ ತೆರೆಯುತ್ತೇವೆ ಎಂದಿದ್ದರು. ಆದರೆ ಬಳಕೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಮುಚ್ಚಿದರು. ಈಗ ಅನ್ನಪೂರ್ಣ ಹೋಗಿ ಅಟಲ್ ಕ್ಯಾಂಟೀನ್ ತೆರೆಯುತ್ತೇವೆ ಎನ್ನುತ್ತಿದ್ದಾರೆ. ಮುಂದಿನ ಪ್ರಣಾಳಿಕೆಯಲ್ಲಿ ಮೋದಿ ಕ್ಯಾಂಟೀನ್ ತೆರೆಯುತ್ತೇವೆ ಎನ್ನುತ್ತಾರೆ ಎಂದು ಟ್ವೀಟ್ ಮಾಡಿದೆ.

    ಇದನ್ನೂ ಓದಿ: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ; ಕಾಂಗ್ರೆಸ್‌ ‘ಗ್ಯಾರಂಟಿ’ಗಳಿಗೆ ಸೆಡ್ಡು!

    ಬಿಜೆಪಿಯ ಸುಳ್ಳುಗಳ ಸರಮಾಲೆ ಹೀಗಿಯೇ ಮುಂದುವರೆಯುತ್ತದೆ. ಬಿಜೆಪಿ ತನ್ನ ಹಿಂದಿನ ಪ್ರಣಾಳಿಕೆಯನ್ನ ಒಮ್ಮೆ ಜನರ ಮುಂದಿಡಲಿ. ಎಷ್ಟು ಭರವಸೆಗಳನ್ನು ಪೂರೈಸಿದೆ ಎಂಬ ಲೆಕ್ಕ ಕೊಡಲಿ. ನಂತರ ಹೊಸ ಪ್ರಣಾಳಿಕೆಯ ಬಗ್ಗೆ ಮಾತಾಡಲಿ. ಬಿಜೆಪಿಯ ಪ್ರಣಾಳಿಕೆ ಎಂದರೆ ಸುಳ್ಳಿನ ಕಂತೆ ಎಂಬುದು ಈಗಾಗಲೇ ಸಾಬೀತಾಗಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts