ಕಾಂಗ್ರೆಸ್‌ನಿಂದ ಏ.1ರಂದು ಕರಾಳ ದಿನ

Latest News

ಚೆನ್ನೈ ರೈಲು ನಿಲ್ದಾಣವೊಂದರಲ್ಲಿ ಸೆಲೆಬ್ರಿಟಿ ನಾಯಿ: ಪ್ರಯಾಣಿಕರನ್ನು ಎಚ್ಚರಿಸುವ ಶ್ವಾನದ ಕತೆ ಬಲು ರೋಚಕ!

ಚೆನ್ನೈ: ಮಾಲೀಕನಿಂದ ಪರಿತ್ಯಕ್ತಗೊಂಡಿರುವ ನಾಯಿಯೊಂದು ಚೆನ್ನೈನ ಪಾರ್ಕ್​ ಟೌನ್​ ರೈಲ್ವೆ ನಿಲ್ದಾಣದ ದಿನ ನಿತ್ಯದ ಪ್ರಯಾಣಿಕರ ನಡುವೆ ಮಿನಿ ಸೆಲೆಬ್ರಿಟಿಯಾಗಿ ಮಿಂಚುತ್ತಿದೆ. ರೈಲು ಹಳಿಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

<ವಿಜಯ ಬ್ಯಾಂಕ್ ವಿಲೀನ ಕೈ ಬಿಡದಿದ್ದರೆ ತೀವ್ರ ಹೋರಾಟ ಎಚ್ಚರಿಕೆ * ದ.ಕ. ಜಿಲ್ಲೆಯ 79 ಬ್ಯಾಂಕ್ ಶಾಖೆ ಎದುರು ಪ್ರತಿಭಟನೆ>

congress celebrate black day on April 1st

ವಿಜಯವಾಣಿ ಸುದ್ದಿಜಾಲ ಮಂಗಳೂರು
ಬ್ಯಾಂಕ್ ಆಫ್ ಬರೋಡಾ ಜತೆಗೆ ಕರಾವಳಿ ಮೂಲದ ವಿಜಯ ಬ್ಯಾಂಕ್ ವಿಲೀನ ರದ್ದುಪಡಿಸಬೇಕು, ಇಲ್ಲವೇ ವಿಲೀನಗೊಂಡ ಬ್ಯಾಂಕ್‌ಗೆ ವಿಜಯ ಬ್ಯಾಂಕ್ ಹೆಸರಿಡಬೇಕು. ಇದಾವುದನ್ನೂ ಪರಿಗಣಿಸದಿದ್ದಲ್ಲಿ ಏ.1ರಂದು ದ.ಕ ಜಿಲ್ಲೆಯಲ್ಲಿ ಕರಾಳ ದಿನ ಹಮ್ಮಿಕೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಬ್ಯಾಂಕ್ ಆಫ್ ಬರೋಡಾ ಜತೆಗೆ ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಗುರುವಾರ ದ.ಕ ಜಿಲ್ಲೆಯ ಎಲ್ಲ 79 ವಿಜಯ ಬ್ಯಾಂಕ್ ಶಾಖೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದರು.

ಮಂಗಳೂರಿನ ವಿಜಯ ಬ್ಯಾಂಕ್ ಸ್ಥಾಪಕರ ಕಚೇರಿ ಎದುರಿನ ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ವಿಜಯ ಬ್ಯಾಂಕನ್ನು ಕರಾವಳಿಯ ಜನರು ದುಡಿದ ಹಣವನ್ನು ಉಳಿಸಿ ಕಟ್ಟಿದ್ದಾರೆ. ಇಂತಹ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಬ್ಯಾಂಕ್ ಜತೆ ವಿಲೀನಗೊಳಿಸುವ ತೀರ್ಮಾನ ಸರಿಯಲ್ಲ. ಇಲ್ಲಿನ ಸಂಸದರು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಬದಲು ಮನವಿ ಕೊಟ್ಟು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದರು.

ವಿಜಯ ಬ್ಯಾಂಕ್ ಹೆಸರನ್ನು ತೆಗೆದು ವಿಲೀನಗೊಳಿಸುವ ನಿರ್ಧಾರ ಕೈ ಬಿಡದಿದ್ದರೆ ಏ.1ರಂದು (ಅಂದಿನಿಂದ ವಿಲೀನ ಜಾರಿ) ಜಿಲ್ಲೆಯಲ್ಲಿ ಕರಾಳ ದಿನ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು.

ಲೈಟ್‌ಹೌಸ್ ಹಿಲ್ ರಸ್ತೆಗೆ ಮೂಲ್ಕಿ ಸುಂದರರಾಮ್ ಶೆಟ್ಟಿ ಅವರ ಹೆಸರು ಇರಿಸುವ ವಿವಾದ ತಲೆದೋರಿದಾಗ ಬಿಜೆಪಿಯವರು ಸಂಧಾನಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಬಂಟರ ವಿರೋಧಿ ಎಂದು ಅಪಪ್ರಚಾರ ನಡೆಸಿದರು ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು. ಬ್ಯಾಂಕ್ ನಿವೃತ್ತ ಅಧಿಕಾರಿ ವಿಮಲಾ ರೈ, ಮುಖಂಡರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಎ.ಸಿ.ವಿನಯ ರಾಜ್, ಪ್ರವೀಣ್ ಚಂದ್ರ ಆಳ್ವ, ಟಿ.ಕೆ.ಸುಧೀರ್, ಅಪ್ಪಿ, ಅಶಿತ್ ಪಿರೇರಾ ಇದ್ದರು.

ಪುತ್ತೂರಿನಲ್ಲಿ ಶಕುಂತಳಾ ಶೆಟ್ಟಿ, ಉಪ್ಪಿನಂಗಡಿಯಲ್ಲಿ ಮಿಥುನ್ ರೈ, ಡಾ.ಬಿ.ರಘು, ಸುಳ್ಯದಲ್ಲಿ ಎಂ.ವೆಂಕಪ್ಪ ಗೌಡ, ಬೆಳ್ತಂಗಡಿಯಲ್ಲಿ ವಸಂತ ಬಂಗೇರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ಯಾಂಟ್ ಎಳೆಯುತ್ತೇನೆ ಎಂದಿದ್ದು ಉದ್ವೇಗದಿಂದ!
ಸಂಸದರ ಅಂಗಿ ಮತ್ತು ಪ್ಯಾಂಟ್ ಎಳೆಯುತ್ತೇನೆ ಎಂದು ಉದ್ವೇಗದಿಂದ ಹೇಳಿದ್ದೇನೆಯೇ ಹೊರತು ದ್ವೇಷದಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸ್ಪಷ್ಟೀಕರಣ ನೀಡಿದರು. ವಿಜಯ ಬ್ಯಾಂಕ್ ಉಳಿಸಿಕೊಳ್ಳಲು ಈ ರೀತಿ ಹೇಳಿದ್ದೆ. ಈ ಕಾಳಜಿ ಸಂಸದರಿಗೆ ಇಲ್ಲ. ಅಧಿವೇಶನದಲ್ಲಿ ಮಾತನಾಡದೆ, ಕೇವಲ ಮನವಿ ನೀಡಿ ಜಿಲ್ಲೆಯ ಜನತೆಯ ಹಾದಿ ತಪ್ಪಿಸುತ್ತಿದ್ದಾರೆ. ಸಂಸದರ ಈ ವರ್ತನೆಗೆ ಜನತೆ ಬುದ್ಧಿ ಕಲಿಸುತ್ತಾರೆ ಎಂದರು.

ವಿಜಯ ಬ್ಯಾಂಕ್ ಉಳಿಸಿ ಹೋರಾಟ ಸಮಿತಿ ರಚನೆ
ಮಂಗಳೂರು: ವಿಜಯ ಬ್ಯಾಂಕ್ ವಿಲೀನದ ವಿರುದ್ಧ ವಿವಿಧ ಸಂಘಟನೆಗಳಿಂದ ಸಮಾಲೋಚನಾ ಸಭೆ ಗುರುವಾರ ನಗರದ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಬ್ಯಾಂಕ್‌ನ್ನು ನಷ್ಟದಲ್ಲಿ ಹೊಂದಿರುವ ಬ್ಯಾಂಕ್‌ನೊಂದಿಗೆ ವಿಲೀನ ಮಾಡಬೇಕೆಂಬ ತೀರ್ಮಾನ ಲೋಪ ದೋಷಗಳಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ತಕ್ಷಣ ನಿಲ್ಲಿಸಬೇಕು ಎಂದು ವಕೀಲ ದಿನೇಶ್ ಹೆಗ್ಡೆ ಉಳೆಪ್ಪಾಡಿ ತಿಳಿಸಿದರು.

ವಿಜಯ ಬ್ಯಾಂಕ್ ಉಳಿಸಿ ಹೋರಾಟ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಕೀಲ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರನ್ನು ಅಧ್ಯಕ್ಷರನ್ನಾಗಿ, ಹರಿಕೃಷ್ಣ ಪುನರೂರು ಗೌರವಾಧ್ಯಕ್ಷರಾಗಿ ಹಾಗೂ ಇತರ ವಿವಿಧ ಸಂಘಟನೆಗಳ ಪ್ರತಿನಿಧಿಗಳನ್ನು ಸೇರಿಸಿ ಹೋರಾಟ ಸಮಿತಿ ರಚಿಸಿ ಮುಂದಿನ ಹಂತದಲ್ಲಿ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಮಾಲೋಚನಾ ಸಭೆಯಲ್ಲಿ ವಿಜಯ ಬ್ಯಾಂಕ್ ನೌಕರರ ಸಂಘಟನೆ ಮುಖಂಡ ಕರುಣಾಕರ ಶೆಟ್ಟಿ, ಮುನೀರ್ ಕಾಟಿಪಳ್ಳ, ಕೊಲ್ಲಾಡಿ ಬಾಲಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...