More

    ಕಾಂಗ್ರೆಸ್​ನ ನಾಲ್ಕನೇ ಗ್ಯಾರಂಟಿಗೂ ಚಾಲನೆ: ವರ್ಣರಂಜಿತ ಸಮಾರಂಭದಲ್ಲಿ ‘ಗೃಹಲಕ್ಷ್ಮಿ’..

    ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾದ ಎರಡು ತಿಂಗಳೊಳಗೆ ಐದು ಗ್ಯಾರಂಟಿಗಳ ಪೈಕಿ ನಾಲ್ಕನೆಯದ್ದು ಕೂಡ ಜಾರಿಯಾದಂತಾಗಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳೆಯರಿಗೆ ಪ್ರತಿ ತಿಂಗಳು ಹಣ ನೀಡುವಂಥ ಈ ಯೋಜನೆ ಇಡೀ ವಿಶ್ವದಲ್ಲೇ ಮೊದಲನೆಯದಾಗಿದೆ ಎಂದರು.

    ಇದನ್ನೂ ಓದಿ: ಟ್ವಿಟರ್​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ, ಪ್ರಧಾನಿ ಮೋದಿ!

    ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸುಮಾರು 1. 28 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ. ಮುಂದಿನ ತಿಂಗಳೇ ಮನೆ ಯಜಮಾನಿಗೆ 2 ಸಾವಿರ ರೂ. ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

    ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಬ್ಯಾಂಕ್​ಗಳನ್ನು ರಾಷ್ಟ್ರೀಕರಣ ಮಾಡಿದ ದಿನ, ಅದೇ ದಿನವೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿದೆ. ಮನೆ ಮನೆಗೂ ಈ ಯೋಜನೆ ತಲುಪಲಿ. ಸರ್ಕಾರ ನೀಡುತ್ತಿರುವ 2000 ರೂಪಾಯಿ ಪ್ರತಿ ಬಡ ಕುಟುಂಬದ ಹಸಿವನ್ನು ನೀಗಿಸುತ್ತದೆ. ನಾನು ರೈತನ ಮಗಳಾಗಿ ಕಷ್ಟವನ್ನು ನೋಡಿದ್ದೇನೆ. ಹಳ್ಳಿಯ ಜೀವನ ಅನುಭವಿಸಿದ್ದೇನೆ ಎಂದು‌‌ ಅವರು ಸ್ಮರಿಸಿದರು.

    ಇದನ್ನೂ ಓದಿ: ವೇದಗಳನ್ನು ಓದಿದವರು ದೊಡ್ಡವರಲ್ಲ, ವೇದನೆಯನ್ನು ಅರಿತವರು ದೊಡ್ಡವರು: ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಯ ಮೊದಲ ಮೂರು ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದರು.

    ಸಮಾರಂಭದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಬೈರತಿ‌ ಸುರೇಶ್, ಶಾಸಕರಾದ ಶ್ರೀನಿವಾಸ ಮಾನೆ, ಆಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ಎ.ಆರ್.ಕೃಷ್ಣಮೂರ್ತಿ, ಎನ್.ಎಚ್.ಕೋನರಡ್ಡಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸಲೀಂ ಅಹಮದ್, ಚನ್ನರಾಜ ಹಟ್ಟಿಹೊಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಉಪಸ್ಥಿತರಿದ್ದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

    ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts