More

    ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ

    ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಕಾಮಗಾರಿಗಳು ಕಳಪೆಯಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀ ಟಾಕೀಸ್ ವೃತ್ತದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಎಲ್ಲೆಡೆ ನಡೆಯá-ತ್ತಿರá-ವ ಕಾಮಗಾರಿಗಳ ಗುಣಮಟ್ಟವನ್ನು ಇಂಜಿನಿಯರ್​ಗಳು ಗಮನಿಸುತ್ತಿಲ್ಲ. ಹಲವೆಡೆ ಉತ್ತಮ ಸ್ಥಿತಿಯಲ್ಲಿರುವ ರಸ್ತೆ ಮತ್ತು ಚರಂಡಿಗಳನ್ನು ಅಗೆದು ಮತ್ತೆ ನಿರ್ವಿುಸಲಾಗುತ್ತಿದೆ. ಇದು ಭ್ರಷ್ಟಾಚಾರಕ್ಕೆ ಸ್ಪಷ್ಟ ನಿದರ್ಶನ ಎಂದು ದೂರಿದರು.

    ಒಂದೇ ಬಾರಿ ನಗರದ ಹಲವು ರಸ್ತೆಗಳನ್ನು ಅಗೆದಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಹಲವು ತಿಂಗಳಿನಿಂದ ಧೂಳು ಕುಡಿಯá-ತ್ತಿರá-ವುದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಕಚೇರಿಯಲ್ಲಿ ಕುಳಿತು ಹೇಳಿಕೆ ನೀಡುತ್ತಿದ್ದಾರೆ. ಕಾಮಗಾರಿಗಳ ಪರಿಶೀಲನೆ ಮಾಡುತ್ತಿಲ್ಲ. ಅಧಿಕಾರಿಗಳು ಗುತ್ತಿಗೆದಾರರ ಜತೆ ಶಾಮೀಲಾಗಿದ್ದಾರೆ ಎಂದು ದೂರಿದರು.

    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಭೂಪಾಲ, ವಕ್ತಾರೆ ಪಲ್ಲವಿ, ಸೇವಾದಳ ಜಿಲ್ಲಾಧ್ಯಕ್ಷ ವೈ.ಎಚ್.ನಾಗರಾಜ್, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಪಾಲಿಕೆ ಸದಸ್ಯರಾದ ಯಮುನಾ ರಂಗೇಗೌಡ, ರೇಖಾ ರಂಗನಾಥ್, ಪ್ರಮುಖರಾದ ರಾಮೇಗೌಡ, ಸೌಗಂಧಿಕಾ, ಎಚ್.ಪಿ.ಗಿರೀಶ್, ಸಂಧ್ಯಾರಾಣಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts