More

  ಗೋಮಾಂಸ ಸೇವನೆಗೆ ಅವಕಾಶ ಮಾಡಿ ಕೊಡುವುದೇ ಕಾಂಗ್ರೆಸ್​ನ ಗುರಿ: ಯೋಗಿ ಆದಿತ್ಯನಾಥ್

  ಲಖನೌ: ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ನಿರತರಾಗಿದ್ದಾರೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಅದೇ ರೀತಿ ಇದೀಗ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್​ ವಿರುದ್ಧ​ ಗಂಭೀರವಾದ ಆರೋಪ ಒಂದನ್ನು ಮಾಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ.

  ಲಖನೌನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್​ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಗೋಮಾಂಸ ಸೇವನೆಗೆ ಅವಕಾಶ ನೀಡುವ ಗುರಿ ಹೊಂದಿದೆ ಎಂದು ಆರೋಪಿಸಿದ್ದಾರೆ.

  ಇದನ್ನೂ ಓದಿ: ಎಸ್​​ಆರ್​ಎಚ್​ ವಿರುದ್ಧ ಕೊಹ್ಲಿ ನಿಧಾನಗತಿಯ ಆಟ; ಮಾಜಿ ನಾಯಕ ಹೇಳಿದ್ದಿಷ್ಟು

  ಭಾರತದಲ್ಲಿ ಹಿಂದೂ ಧರ್ಮವು ಗೋವುಗಳನ್ನು ಪವಿತ್ರ ಎಂದು ಪರಿಗಣಿಸಿ ಪೂಜಿಸುತ್ತಾರೆ. ಮುಸ್ಲಿಮರಿಗೆ ವಿನಾಯಿತಿ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್​ ಪಕ್ಷವು ಗೋಮಾಂಸ ಸೇವನೆಗೆ ಅವಕಾಶ ಮಾಡಿಕೊಡಲು ಮುಂದಾಗಿದೆ. ಈ ಕ್ರಮವು ಸ್ವೀಕಾರಾರ್ಹವಲ್ಲ ಆದ ಕಾರಣ ಜನರು ಕಾಂಗ್ರೆಸ್​ ಪಕ್ಷವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.

  ಅಧಿಕಾರಕ್ಕೆ ಬಂದರೆ ಸಂಪತ್ತು, ಜಾತಿ ಸಮೀಕ್ಷೆಯನ್ನು ಮಾಡಿಸುವುದಾಗಿ ಕಾಂಗ್ರೆಸ್​ ಪಕ್ಷ ಹೇಳಿದೆ. ಈ ಮೂಲಕ ಕಾಂಗ್ರೆಸ್​ ಒಂದು ಧರ್ಮವನ್ನು ಓಲೈಸಲು ಮುಂದಾಗಿದ್ದು, ಕಾಂಗ್ರೆಸ್​ನ ಈ ಮನೋಭಾವಕ್ಕೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts