25.1 C
Bangalore
Friday, December 6, 2019

ಕಾಂಗ್ರೆಸ್ ಇನ್ನೊಂದು ಈಸ್ಟ್ ಇಂಡಿಯಾ ಕಂಪನಿ- ಸಚಿವ ಸುರೇಶ ಅಂಗಡಿ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬೆಳಗಾವಿ: ಒಂದೇ ಭಾರತ, ಒಂದೇ ಕಾನೂನು ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಅಪ್ರತಿಮ ನಾಯಕ ಶ್ಯಾಮಪ್ರಸಾದ ಮುಖರ್ಜಿ ಅವರಿಂದ ದೇಶದ ಪ್ರತಿ ನಾಗರಿಕ ಕಂಡ ಕನಸನ್ನು ಭಂಗಗೊಳಿಸುತ್ತ ಬಂದಿದೆ. ಕಾಂಗ್ರೆಸ್ ಇನ್ನೊಂದು ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಲೇವಡಿ ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜಮ್ಮು ಕಾಶ್ಮೀರದಲ್ಲಿ 370 ಹಾಗೂ 35ಅ ವಿಧಿ ರದ್ದುಪಡಿಸುವ ಮೂಲಕ ಒಂದೇ ಭಾರತ, ಒಂದೇ ಕಾನೂನು ಜಾರಿಗೊಳಿಸಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರದ 70ವರ್ಷಗಳಲ್ಲಿ ಇಂಥದೊಂದು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಇದು ಮೋದಿ ಸರ್ಕಾರದ ಸಾಧನೆ ಎಂದರು.

ಮೋದಿ ಹಾಗೂ ಅಮಿತ್ ಷಾ ದಿಟ್ಟ ನಡೆಗೆ ಜಗತ್ತೇ ನಿಬ್ಬೆರಗಾಗಿದೆ. ಆದರೆ ಕಾಂಗ್ರೆಸ್ ನಾಯಕರು ಎಲ್ಲವನ್ನೂ ವಿರೋಧಿಸುತ್ತಿದ್ದಾರೆ. ಮಹಾತ್ಮಾ ಗಾಂಧೀಜಿ ಕಾಲದ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಅಂತರವಿದೆ. ಇದು ಇಟಲಿ ಕಾಂಗ್ರೆಸ್. ಇದು ಇನ್ನೊಂದು ಈಸ್ಟ್ ಇಂಡಿಯಾ ಕಂಪನಿ ಎಂದು ಸಚಿವ ಸುರೇಶ ಅಂಗಡಿ ಲೇವಡಿ ಮಾಡಿದರು.

ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿ ನಂತರದ ಬೆಳವಣಿಗೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ನವರನ್ನು ಗುರಿ ಮಾಡಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಇದು ಸರಿಯಲ್ಲ. ವಾಜಪೇಯಿ ಸರ್ಕಾರ ಇದ್ದಾಗ ನನ್ನ ಮೇಲೆ ಕೂಡ ಐಟಿ ದಾಳಿ ನಡೆದಿತ್ತು. ಐಟಿ ಇಲಾಖೆ ತನ್ನ ಕೆಲಸ ತಾನು ಮಾಡುತ್ತದೆ. ತನಿಖೆಗೆ ಸಹಕರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನವರು ಪ್ರತಿಭಟನೆ ಹೆಸರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆಸ್ತಿಗಳಿಗೆ ಹಾನಿ ಮಾಡುತ್ತಿದ್ದಾರೆ. ಮೋದಿ ಹಾಗೂ ಅಮಿತ್ ಷಾ ಅವರ ಭಾವಚಿತ್ರಗಳನ್ನು ಸುಡುತ್ತಿದ್ದಾರೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ದೇಶದ ಕಪ್ಪು ಹಣವನ್ನು ವಾಪಸ್ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವಾಗ, ಕಾಂಗ್ರೆಸ್ ದೇಶದ ಆಸ್ತಿ ಹಾಳು ಮಾಡುವ ಕೆಲಸ ಮಾಡಬಾರದು. ಯಾರು ತಪ್ಪು ಮಾಡಿದರೂ ನೆಲದ ಕಾನೂನಿನಂತೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ದೇಶದ ವಿರುದ್ಧ ಘೋಷಣೆ ಕೂಗುವವರಿಗೆ ಗುಂಡಿಕ್ಕಿ ಎಂದು ನಾನು ಹೇಳಿದ್ದೆ. ಆದರೆ ದೇಶದ ವಿರುದ್ಧ ಘೋಷಣೆ ಕೂಗುವವರಿಗೆ ಕಾಂಗ್ರೆಸ್ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ 16 ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದೆ. ಹಿಂದೆ ಪ್ರವಾಹ ಉಂಟಾದಾಗ, ಸಂತ್ರಸ್ತ ಪ್ರತಿ ಕುಟುಂಬಕ್ಕೆ ಕಾಂಗ್ರೆಸ್ ಸರ್ಕಾರ 200 ರೂ. ನೀಡಿತ್ತು. ಈಗ ಬಿಜೆಪಿ ಸರ್ಕಾರ 10 ಸಾವಿರ ರೂ. ನೀಡಿದೆ. ಪೂರ್ಣ ಮನೆ ಕಟ್ಟಲು 5 ಲಕ್ಷ ರೂ., ಭಾಗಶಃ ನಿರ್ಮಾಣಕ್ಕೆ 1 ಲಕ್ಷ ರೂ. ಹಾಗೂ ಬಾಡಿಗೆ ನೀಡಲು ಅನುಕೂಲವಾಗುವಂತೆ 50 ಸಾವಿರ ರೂ. ನೀಡುತ್ತಿದೆ ಎಂದರು.

ಶಾಸಕ ಅನಿಲ ಬೆನಕೆ, ಬಿಜೆಪಿ ಬೆಳಗಾವಿ ಮಹಾನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ರಾಜ್ಯ ವಕ್ತಾರ ಎಂ. ಬಿ. ಜಿರಲಿ, ಮಾಧ್ಯಮ ವಕ್ತಾರರಾದ ಬಸವರಾಜ ರೊಟ್ಟಿ ಹಾಗೂ ಹನುಮಂತ ಕೊಂಗಳಿ, ಗಿರೀಶ ಧೊಂಗಡಿ ಮತ್ತು ಇತರರು ಉಪಸ್ಥಿತರಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...