ರಾಹುಲ್ ಗಾಂಧಿ ಕೈ ಬಲಪಡಿಸಿ

ವಿಜಯಪುರ: ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಂಗಳವಾರ ಬಬಲೇಶ್ವರ ಮತಕ್ಷೇತ್ರದ ಕಾರ್ಯಕರ್ತರ ಸಭೆ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರಣ ಕ್ಷೇತ್ರದ ಶಾಸಕ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಲಜಾ ನಾಯಕ, ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ, ಬ್ಲಾಕ್ ಅಧ್ಯಕ್ಷರಾದ ಸಿದ್ದು ಗೌಡನವರ, ಈರಗೊಂಡ ಬಿರಾದಾರ, ಜಿಪಂ ಸದಸ್ಯ ಉಮೇಶ ಕೋಳಕೂರ, ಜಗದೀಶಗೌಡ ಪಾಟೀಲ, ಸೋಮನಾಥ ಕಳ್ಳಿಮನಿ, ತಾಪಂ ಸದಸ್ಯ ದಾನಪ್ಪ ಚೌಧರಿ, ಬಿ.ಎಲ್.ನಾಟೀಕರ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಬಸವರಾಜ.ಎ.ಪಿ, ಅಬ್ದುಲ್‌ಹಮೀದ್ ಮುಷರೀಪ್, ರುಕ್ಸಾನಾ ಉಸ್ತಾದ್, ಅಣ್ಣಾಸಾಬ ಹಂಚಿನಮನಿ ಸೇರಿದಂತೆ ಮುಖಂಡರಾದ ಲಕ್ಷ್ಮಿ ದೇಸಾಯಿ, ರಾಜುಗೌಡ ಪೋಲಿಸಪಾಟೀಲ, ಮಹ್ಮದ್‌ರಫೀಕ್ ಟಪಾಲ್, ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು.