ಕುಟ್ರುಪಾಡಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಜಯ

New Project (8)
Published on

ಕಡಬ: ಕುಟ್ರುಪಾಡಿ ಗ್ರಾಪಂನ 3ನೇ ವಾರ್ಡಿನಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಲ್ಸಮ್ಮ ಎ.ಜೆ. 109 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಲಿಯಮ್ಮ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಲ್ಸಮ್ಮ ಎ.ಜೆ. 312 ಮತ ಪಡೆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಲಿಯಮ್ಮ 203 ಮತ ಪಡೆದರು. 11 ಮತಗಳು ತಿರಸ್ಕೃತಗೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net