ಕಾಂಗ್ರೆಸ್ ಬೆಂಬಲಿತ ಸದಸ್ಯ ಬಿಜೆಪಿ ಸೇರ್ಪಡೆ

bjp
Published on

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಾನಂದ ಬಂಟ್ರಿಯಾಲ್ ಹಾಗೂ ಅವರ ಪತ್ನಿ, ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ ಬಂಟ್ರಿಯಾಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಅ.15ರಂದು ಬಂಟ್ವಾಳದಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಇನ್ನಿತರ ಪ್ರಮುಖ ನಾಯಕರ ಸಮ್ಮುಖದಲ್ಲಿ ಜಯಾನಂದ ಬಂಟ್ರಿಯಾಲ್ ದಂಪತಿ ಬಿಜೆಪಿ ಸೇರ್ಪಡೆಗೊಂಡರು.

ಜಯಾನಂದ ಬಂಟ್ರಿಯಾಲ್ ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷರಾಗಿದ್ದಾರೆ. ಪ್ರಸ್ತುತ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ. ಸುಚಿತ್ರಾ ಜೆ ಬಂಟ್ರಿಯಾಲ್ ಅವರು ಪ್ರಸ್ತುತ ನೆಲ್ಯಾಡಿ ಜೆಸಿಐ ಅಧ್ಯಕ್ಷೆಯಾಗಿದ್ದು ವಿವಿಧ ಸಂಘ-ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net