More

    ಬಿಜೆಪಿಯನ್ನು ಹಿಂದಿಕ್ಕಿ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಕಾಂಗ್ರೆಸ್!

    ಬೆಂಗಳೂರು: ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಶುರುವಾಗಿದ್ದು ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಆದರೆ ಮತ ಎಣಿಕೆ ಹೆಚ್ಚಾಗುತ್ತಿದ್ದಂತೆಯೇ, ಕಾಂಗ್ರೆಸ್ ಮುನ್ನಡೆ ಸಾಧಿಸಿದೆ., ಇದೀಗ ಕಾಂಗ್ರೆಸ್ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 75 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್ 28 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು 2 ಕ್ಷೇತ್ರಗಳಲ್ಲಿ ಪಕ್ಷೇತರರು ಮುಂದಿದ್ದಾರೆ.

    ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವವರೆಗೂ ಸ್ಪಷ್ಟ ಮುನ್ನಡೆ ಅಥವಾ ಹಿನ್ನಡೆ ಎಂದು ಹೇಳಬಹುದಾಗಿದೆ. ಸದ್ಯಕ್ಕೆ ಮತ ಎಣಿಕೆ ಪ್ರಾರಂಭವಾಗಿದ್ದು ರಾಜ್ಯದ ಚುಕ್ಕಾಣಿ ಯಾರು ಹಿಡಿಯುತ್ತಾರೆ ಎನ್ನುವ ಚಿತ್ರಣ ಮಧ್ಯಾಹ್ನದ ನಂತರವೇ ಸಿಗಲಿದೆ.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.

    73.19 ದಾಖಲೆ ಮತದಾನ: ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts