More

    ಕಾಂಗ್ರೆಸ್‌ನಿಂದ ಜನರಿಗೆ ದ್ರೋಹ – ಬಿಜೆಪಿ ನಾಯಕರಿಂದ ಆರೋಪ

    ಕೊಪ್ಪಳ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಸುಳ್ಳು ಹೇಳುತ್ತಿದೆ. ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ನಗರದ ಅಶೋಕ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

    ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದರು. ಆದರೆ, ಈಗ ನೂರಾರು ಷರತ್ತು ವಿಧಿಸುತ್ತಿದ್ದಾರೆ. ಬಾಡಿಗೆ ಮನೆಯಲ್ಲಿದ್ದವರಿಗೆ ಉಚಿತ ನೀಡುವ ಬಗ್ಗೆ ಸ್ಪಷ್ಟತೆ ಇಲ್ಲ. ಸರಾಸರಿ ವಿದ್ಯುತ್‌ಗಿಂತ ಹೆಚ್ಚು ಬಳಸಿದಲ್ಲಿ ಎಲ್ಲ ಮೊತ್ತ ಗ್ರಾಹಕರ ಮೇಲೆ ಬೀಳಲಿದೆ. ಮತ್ತೊಂದೆಡೆ ವಿದ್ಯುತ್ ದರವನ್ನು ಗಣನೀಯವಾಗಿ ಹೆಚ್ಚಳ ಮಾಡಿದೆ. ಇದರಿಂದ ಗ್ರಾಹಕರ ಮೇಲೆ ಹೊರೆ ಬೀಳಲಿದೆ.

    ಇದನ್ನೂ ಓದಿ: ಗ್ಯಾರಂಟಿಗಳ ಷರತ್ತು ವಿರೋಧಿಸಿ ಪ್ರತಿಭಟನೆ

    ಜನರ ಜೇಬಿನಿಂದಲೇ ಹಣ ಕದ್ದು, ಉಚಿತ ವಿದ್ಯುತ್ ನೀಡುತ್ತೇವೆಂದು ಮಂಕು ಬೂದಿ ಎರಚುವ ಕೆಲಸ ಮಾಡಲಾಗುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಕಾಂಗ್ರೆಸ್ ನಿಜ ಬಣ್ಣ ಬಯಲಾಗುತ್ತಿದೆ. ಸುಳ್ಳು ಗ್ಯಾರಂಟಿ ನೀಡಿ ಜನರಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿದರು.

    ಕೊಟ್ಟ ಮಾತಿನಂತೆ ಎಲ್ಲರಿಗೂ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಬೇಕು. ಯಾವುದೇ ಷರತ್ತುಗಳನ್ನು ವಿಧಿಸಬಾರದು. ಬಾಡಿಗೆ ಮನೆಯಲ್ಲಿದ್ದವರಿಗೂ ಉಚಿತ ವಿದ್ಯುತ್ ಪೂರೈಸಬೇಕು. ವಿದ್ಯುತ್ ದರ ಹೆಚ್ಚಳ ಮಾಡಬಾರದು. ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡುವುದು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವಿರುದ್ಧ ದೊಡ್ಡಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬರುವ ಚುನಾವಣೆಯಲ್ಲಿ ಜನರು ಸುಳ್ಳು ಕಾಂಗ್ರೆಸ್‌ಗೆ ತಕ್ಕ ಉತ್ತರ ನೀಡಲಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

    ಸಂಸದ ಸಂಗಣ್ಣ ಕರಡಿ, ಶಾಸಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯೆ ಹೇಮಲತಾ ನಾಯಕ, ಪ್ರಮುಖರಾದ ಚಂದ್ರು ಪಾಟೀಲ್ ಹಲಗೇರಿ, ನವೀನ್ ಗುಳಗಣ್ಣನವರ, ಮಾಜಿ ಶಾಸಕ ಜಿ.ವೀರಪ್ಪ, ಸಾಲೋಣಿ ನಾಗಪ್ಪ, ರಾಜು ಬಾಕಳೆ, ಕೆ.ಮಹೇಶ, ಮಂಜುಳಾ ಕರಡಿ, ಶೋಭಾ ನಗರಿ, ವಾಣಿಶ್ರೀ ಮಠದ, ಕೀರ್ತಿ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts