More

    ಕೃಷಿ ಸಮ್ಮಾನ ರದ್ದು ಮಾಡಿದ ಕಾಂಗ್ರೆಸ್

    ಕಾರವಾರ: ಕೃಷಿಕರ ಮಕ್ಕಳ ಓದಿಗೆ ಅನುಕೂಲವಾಗುವ ವಿದ್ಯಾನಿಧಿ ಹಾಗೂ ಕೃಷಿ ಸಮ್ಮಾನ ಯೋಜನೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ರದ್ದು ಮಾಡಿರುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ ಹೊಸಕೊಪ್ಪ ಹೇಳಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿಕರ ಏಳಿಗೆಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಲು ಹೊರಟಿರುವುದರ ವಿರುದ್ಧ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದರು.

    ಎಪಿಎಂಸಿ ಕಾಯ್ದೆ ರದ್ದು ಮಾಡಿ ರೈತರ ಸ್ವಾತಂತ್ರ್ಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ಎಪಿಎಂಸಿ ಕಾಯ್ದೆಯಲ್ಲಿ ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಲು ಅವಕಾಶವಿತ್ತು. ಈಗ ಮತ್ತೆ ಎಪಿಎಂಸಿ ತೆಕ್ಕೆಗೆ ಎಲ್ಲ ಬೆಳೆಗಳನ್ನು ತರುವ ಮೂಲಕ ಮಧ್ಯವರ್ತಿಗಳ ಹಾವಳಿಗೆ ಮಣೆ ಹಾಕಲಾಗಿದೆ ಎಂದು ಆರೋಪಿಸಿದರು.

    ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹಲವು ಗ್ಯಾರಂಟಿಗಳನ್ನು ಘೊಷಣೆ ಮಾಡಿತ್ತು. ಚುನಾವಣೆಯಲ್ಲಿ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೆಣಗಾಡುತ್ತಿದೆ. ಯುವಕರಿಗೆ ಉದ್ಯೋಗ ನೀಡಿ, ದುಡಿಯುವ ಕೈಗಳನ್ನು ಬಲಪಡಿಸುವ ಬದಲು ಹಣ ನೀಡಿ ದುಶ್ಚಟಗಳ ದಾಸರನ್ನಾಗಿ ಮಾಡುತ್ತಿದೆ ಎಂದು ದೂರಿದರು. ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ, ಜಿಲ್ಲಾ ವಿಶೇಷ ಆಹ್ವಾನಿತ ಮನೋಜ ಭಟ್ಟ, ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೆಕರ್, ನಯನಾ ನೀಲಾವರ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts