More

  ರಾಜಸ್ಥಾನ ಚುನಾವಣೆ; ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ

  ಜೈಪುರ: ಮುಂಬರುವ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.

  ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ (75) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೂತ್ರಪಿಂಡ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರನ್ನು ಏಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ಇದನ್ನೂ ಓದಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದ ನ್ಯೂಜಿಲೆಂಡ್; ತಂಡದಲ್ಲಿ ಬದಲಾವಣೆ ಸಾಧ್ಯತೆ

  ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್​ ನಾಯಕರೊಬ್ಬರು, ಗುರ್ಮೀತ್​ ಸಿಂಗ್​ ಅವರು ಬಹುಕಾಲದಿಂದ ಅಧಿಕ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

  ಗುರ್ಮೀತ್​ ಸಿಂಗ್​ ಅವರ ನಿಧನವನ್ನು ಕಾಂಗ್ರೆಸ್​ ಪಕ್ಷದ ಉನ್ನತ ಮೂಲಗಳು ಖಚಿತಪಡಿಸಿದ್ದು, ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

  See also  ಬಾಕ್ಸ್​ ಪ್ಯಾಕ್​ ಮಾಡುವಾಗಲೇ ಕುಸಿದು ಬಿದ್ದು ಯುವಕ ಸಾವು; ವೈದ್ಯರು ಹೇಳಿದ್ದಿಷ್ಟು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts