More

    ಗದಗದಲ್ಲಿ ಕಾಂಗ್ರೆಸ್​ ಅಭ್ಯರ್ಥಿಗೆ ಹ್ಯಾಟ್ರಿಕ್ ಗೆಲುವು; ಮೆಣಸಿನಕಾಯಿ ವಿರುದ್ಧ ಗೆದ್ದ ಎಚ್​.ಕೆ ಪಾಟೀಲ್!

    ಗದಗ: ಗದಗ ಕ್ಷೇತ್ರದಲ್ಲಿ ಎಚ್ ಕೆ ಪಾಟೀಲ್ ಹ್ಯಾಟ್ರಿಕ್ ಗೆಲುವನ್ನು ದಾಖಲಿಸಿದ್ದಾರೆ. ಇದೀಗ ನಿರಂತರವಾಗಿ ಮೂರನೇಯ ಬಾರಿಗೆ ಎಚ್​ಕೆ ಪಾಟೀಲ್ ಆಯ್ಕೆಯಾಗಿದ್ದಾರೆ.

    ಗದಗ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ 16 ಸುತ್ತುಗಳು ಮುಕ್ತಾಯವಾಗಿದ್ದು ಎಚ್ ಕೆ ಪಾಟೀಲ 15,166 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ 73,820 ಮತಗಳನ್ನು ಪಡೆದಿದ್ದು ಎಚ್ ಕೆ ಪಾಟೀಲ್- 88,986 ಪಡೆದು ವಿಜಯಪತಾಕೆ ಹಾರಿಸಿದ್ದಾರೆ.

    ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

    2018ರ ಫಲಿತಾಂಶ ಏನಿತ್ತು?

    2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts