More

    ಸೋಲೊಪ್ಪಿಕೊಳ್ತಾ ಕಾಂಗ್ರೆಸ್​?; ಈ ಬಾರಿ ಬಿಜೆಪಿಗೆ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಎಂದು ಸ್ವತಃ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

    ವದೆಹಲಿ: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಈಗಾಗಲೇ ಸಿದ್ದತೆಗಳನ್ನು ಆರಂಭಿಸಿವೆ. ಹಾಲಿ ನಡೆಯುತ್ತಿರುವ ಸಂಸತ್​ ಅಧಿವೇಶನದಲ್ಲಿ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸೀಟು ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

    ಮಲ್ಲಿಕಾರ್ಜುನ ಖರ್ಗೆ ಆಡಿರುವ ಮಾತಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಭಾಪತಿ ಜಗದೀಪ್​ ಧನಕರ್​, ಪ್ರಧಾನಿ ನರೇಂದ್ರ ಮೋದಿ ಹಾಗೂ ಸದಸ್ಯರು ನಗೆಗಡಲಲ್ಲಿ ತೇಲಿರುವುದನ್ನು ನೋಡಬಹುದಾಗಿದೆ.

    ಇದನ್ನೂ ಓದಿ: ನರೇಂದ್ರ ಮೋದಿ ಜೊತೆ ಹೋದಾಗಲೂ ಪಕ್ಷದ ಶಾಲು ಹಾಕುತ್ತೇನೆ; ಎಚ್​ಡಿಕೆ ವಿರುದ್ಧ ಅಸಮಾಧಾನ ಹೊರಹಾಕಿದ ಎಚ್​ಡಿಡಿ

    ಸಂಸತ್ತಿನಲ್ಲಿ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿಯವರತ್ತ ನೋಡಿದ ಖರ್ಗೆ, ನಿಮಗೆ ಬಹುಮತ ಇದೆ. ಈ ಹಿಂದೆ 330-340 ಅವರು ಸ್ಥಾನಗಳನ್ನು ಹೊಂದಿದ್ರಿ. ಈ ಬಾರಿ ಅದು 400 ದಾಟುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಇದನ್ನು ಕೇಳಿ ಬಿಜೆಪಿ ನಾಯಕರು ಜೋರಾಗಿ ಚಪ್ಪಾಳೆ ತಟ್ಟಿದ್ದು, ಸಂಸತ್ ಭವನ ನಗೆಗಡಲಲ್ಲಿ ಮುಳುಗಿತು. ಸ್ವತಃ ಪ್ರಧಾನಿ ಮೋದಿ ಕೂಡ ಜೋರಾಗಿ ನಗುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.

    2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂಬುದನ್ನು ರಾಜ್ಯಸಭೆಯಲ್ಲಿ ಸ್ವತಃ ಕಾಂಗ್ರೆಸ್‌ ಅಧ್ಯಕ್ಷರೇ ಭವಿಷ್ಯ ನುಡಿದಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದೆ. ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್‌ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ ಘೋಷ ವಾಕ್ಯವನ್ನು ಬಳಸಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts