More

    ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯ: ಸಿಎಲ್​ಪಿ ನಾಯಕನಾಗಿ ಸಿದ್ದು ಹೆಸರು ಘೋಷಣೆ, ರಾಜಭವನದತ್ತ ಕೈ ನಾಯಕರು

    ಬೆಂಗಳೂರು: ಇಂದು ರಾತ್ರಿ ನಡೆದ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಯಿತು.

    ಶಾಸಕಾಂಗ ನಾಯಕನ ಆಯ್ಕೆಯ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ನಿರ್ಣಯ ಮಂಡಿಸಿದರು. ಇದಕ್ಕೆ ಶಾಸಕರು ಅನುಮೋದನೆ ನೀಡಿದರು. ಬಳಿಕ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಘೋಷಣೆ ಮಾಡಲಾಯಿತು.

    ಇದನ್ನೂ ಓದಿ: ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭದಂದು ಸಿಇಟಿ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಕಿರಿಕಿರಿ!

    ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯ: ಸಿಎಲ್​ಪಿ ನಾಯಕನಾಗಿ ಸಿದ್ದು ಹೆಸರು ಘೋಷಣೆ, ರಾಜಭವನದತ್ತ ಕೈ ನಾಯಕರು

    ಕಾಂಗ್ರೆಸ್​ ಪಕ್ಷ ಬಹುಮತ ಪಡೆದ ಬಳಿಕ ನಡೆಯುತ್ತಿರುವ ಎರಡನೇ ಶಾಸಕಾಂಗ ಸಭೆ ಇದಾಗಿದ್ದು, ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ವೀಕ್ಷಕರು ಎಐಸಿಸಿಯಲ್ಲಿ ನಡೆದ ನಿರ್ಣಯವನ್ನು ಪ್ರಸ್ತಾಪಿಸಿದರು. ಎಐಸಿಸಿ ಅಧ್ಯಕ್ಷರು ತೆಗೆದುಕೊಂಡ ಸಿಎಂ ಹಾಗೂ ಡಿಸಿಎಂ ಆಗಿ ಆಯ್ಕೆ ಮಾಡಿರುವ ವಿಚಾರವನ್ನು ಶಾಸಕರ ಮುಂದೆ ಪ್ರಸ್ತಾಪ ಮಾಡಿದರು.

    ಮೊದಲ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರ ನಿರ್ಣಯಕ್ಕೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದ್ದು, ಈಗ ಎಐಸಿಸಿ ನಿರ್ಣಯಕ್ಕೆ ಇಂದಿನ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಅನುಮೋದನೆ ನೀಡಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲು ಶಾಸಕಾಂಗ ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಹಕ್ಕು ಮಂಡನೆ ನಿರ್ಣಯಕ್ಕೆ ಎಲ್ಲ ಶಾಸಕರು ಲಿಖಿತ ರೂಪದಲ್ಲಿ ಸಹಿ ಹಾಕಿದ್ದಾರೆ.

    ಶಾಸಕಾಂಗ ಪಕ್ಷದ ಸಭೆಯ ನಿರ್ಣಯದೊಂದಿಗೆ ಶಾಸಕರುಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಹಕ್ಕು ಮಂಡನೆ ಮಾಡಲಿದ್ದಾರೆ. ಸದ್ಯ ಶಾಸಕಾಂಗ ಸಭೆ ಮುಕ್ತಾಯವಾಗಿದ್ದು, ರಾಜಭವನದತ್ತ ಕೈನಾಯಕರು ತೆರಳಿದ್ದಾರೆ.

    ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಮಾಡಿದ ಡಿಕೆಶಿ

    ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಹೆಸರನ್ನು ಡಿ.ಕೆ.ಶಿವಕುಮಾರ್​ ಅವರು ಪ್ರಸ್ತಾಪ ಮಾಡಿದರು. ಡಿಕೆಶಿ ಪ್ರಸ್ತಾವನೆಗೆ ಡಾ.ಜಿ.ಪರಮೇಶ್ವರ, ಎಚ್.ಕೆ. ಪಾಟೀಲ್, ಎಂ. ಬಿ ಪಾಟೀಲ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್, ತನ್ವೀರ್ ಸೇಠ್ ಹಾಗೂ ಕೆ.ಎಚ್. ಮುನಿಯಪ್ಪ ಅನುಮೋದನೆ ನೀಡಿದರು.

    ಇದನ್ನೂ ಓದಿ: ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್

    Congress CLP Meeting

    ಇಂದಿರಾ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್​ ಸಿಂಗ್​ ಸುರ್ಜೇವಾಲ, ಸುಶೀಲ್ ಕುಮಾರ್ ಶಿಂಧೆ, ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾದರು.

    ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…

    ಬೆಂಗಳೂರಿಗೆ ಆಗಮಿಸಿದ ಸಿದ್ದು, ಡಿಕೆಶಿ: ಶಾಸಕಾಂಗ ಪಕ್ಷದ ಸಭೆ ಬಳಿಕ ರಾಜಭವನಕ್ಕೆ ತೆರಳಲಿರುವ ಸಿದ್ದು

    ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts